Thursday, August 5, 2021
spot_img
Homeಸ್ಥಳೀಯ ಸುದ್ದಿಆಹಾರ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಆಹಾರ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಪುತ್ತೂರು: ತುತ್ತು ಗಂಟಲಿನಲ್ಲಿ ಸಿಲುಕಿ ಅಸ್ವಸ್ಥಗೊಂಡ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ‌ ನಿಡ್ಪಳ್ಳಿ ಗ್ರಾಮದ ಕುಕ್ಕುಪುಣಿಯಲ್ಲಿ ನಡೆದಿದೆ. ಕೊರಗಪ್ಪ ನಲಿಕೆ (55) ಮೃತಪಟ್ಟವರು. ಕೊರಗಪ್ಪ ನಲಿಕೆಯವರು ನಿನ್ನೆ ಮಧ್ಯಾಹ್ನ ಮಾಂಸದೂಟ ಮಾಡುತ್ತಿದ್ದ ವೇಳೆ ಊಟದ ತುತ್ತು ಅವರ ಗಂಟಲಲ್ಲಿ ಸಿಲುಕಿಕೊಂಡಿತ್ತು. ಪರಿಣಾಮವಾಗಿ ಉಸಿರಾಡಲು ಕಷ್ಟವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮುಡಿಪಿನಡ್ಕ ಸ್ಥಳೀಯ ಕ್ಲಿನಿಕ್​​ ಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸುವಂತೆ ಸಲಹೆ ನೀಡಿದ್ದಾರೆ. ಅದರಂತೆ ಕೊರಗಪ್ಪ ಅವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!