Saturday, December 4, 2021
spot_img
Homeರಾಜ್ಯಡಿಸೆಂಬರ್‌ವರೆಗೆ ಜಿ.ಪಂ., ತಾ.ಪಂ, ಚುನಾವಣೆ ಇಲ್ಲ : ಸಚಿವ ಈಶ್ವರಪ್ಪ ಸ್ಪಷ್ಟನೆ

ಡಿಸೆಂಬರ್‌ವರೆಗೆ ಜಿ.ಪಂ., ತಾ.ಪಂ, ಚುನಾವಣೆ ಇಲ್ಲ : ಸಚಿವ ಈಶ್ವರಪ್ಪ ಸ್ಪಷ್ಟನೆ

ದಾವಣಗೆರೆ: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್‌ವರೆಗೆ ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್ ಚುನಾವಣೆ ನಡೆಸಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ. ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್‌ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್‌ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!