Saturday, December 4, 2021
spot_img
Homeಸ್ಥಳೀಯ ಸುದ್ದಿಮುದ್ರಾಡಿ : ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಮುದ್ರಾಡಿ : ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಹೆಬ್ರಿ : ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು ಅತೀ ಶೀಘ್ರವಾಗಿ 100 ಹಾಸಿಗೆಯ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ಈ ಕುರಿತು ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದು ಆಗಸ್ಟ್‌ ತಿಂಗಳಿನಲ್ಲಿ ಅನುಮೋದನೆ ದೊರೆಯಲಿದೆ ಎಂದು ಶಾಸಕ ಸುನೀಲ್‌ ಕುಮಾರ್‌ ಹೇಳಿದರು.
ಅವರು ಸೋಮವಾರ ಮುದ್ರಾಡಿ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟನೆ, ಪಂಚಾಯತ್‌ ವ್ಯಾಪ್ತಿಯ ವಿವಿಧ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ಮಾತನಾಡಿದರು. ಕಾರ್ಕಳ ಕ್ಷೇತ್ರದಲ್ಲಿ ಅಂತರ್ಜಲದ ಮಟ್ಟ ಏರಿಸಲು ಕೆರೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಇದರೊಂದಿಗೆ ಮುದ್ರಾಡಿಯ ಮದಗವನ್ನು ಅಭಿವೃದ್ಧಿಪಡಿಸಲಾಗುವುದು. ಕಬ್ಬಿನಾಲೆಯ ಮೇಲ್ಮಠ ರಸ್ತೆ 60 ಲಕ್ಷ ರೂ., ಮುದ್ರಾಡಿ ಜರ್ವತ್ತು ರಸ್ತೆಯನ್ನು 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಮಾಡಲಾಗುವುದು ಎಂದು ಸುನೀಲ್‌ ಕುಮಾರ್‌ ತಿಳಿಸಿದರು.

ಪ್ರಾಧಿಕಾರದಿಂದ 4 ಕೋಟಿ ರೂ.- ಮಟ್ಟಾರು
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕಾರ್ಕಳ ಕ್ಷೇತ್ರಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 4 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಆದ್ಯತೆ ನೆಲೆಯಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದರು.

ವಿವಿಧೆಡೆ ಶಿಲಾನ್ಯಾಸ ಪೂಜೆ
ಕಬ್ಬಿನಾಲೆಯ ನೀರಾಣಿ ಮೇಲ್ಮಠ ರಸ್ತೆ ಅಭಿವೃದ್ಧಿ ಕಾಮಗಾರಿ, ಜರುವತ್ತು ಮೂಡುಬೆಟ್ಟು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮುದ್ರಾಡಿ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವವರಿಗೆ ಇದೇ ಸಂದರ್ಭ ಗೌರವಧನ ವಿತರಣೆ ಮಾಡಲಾಯಿತು.

ಸನ್ಮಾನ
ಮುದ್ರಾಡಿ ಪಂಚಾಯತ್‌ಗೆ ಕಂಪ್ಯೂಟರ್ ಹಾಗೂ ಕೊರೋನ ವಾರಿಯರ್ಸ್ ಗೆ ಧನ ಸಹಾಯ ಮಾಡಿದ ದಾನಿಗಳಿಗೆ ಇದೇ ಸಂದರ್ಭ ಸನ್ಮಾನ ಮಾಡಲಾಯಿತು. ಹೆಬ್ರಿ ತಹಶೀಲ್ದಾರ್‌ ಪುರಂದರ, ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್‌, ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಹೆಗ್ಡೆ, ಉಪಾಧ್ಯಕ್ಷೆ ವಸಂತಿ ಪೂಜಾರಿ, ತಾ.ಪಂ. ಮಾಜಿ ಅಧ್ಯಕ್ಷ ರಮೇಶ್‌ ಕುಮಾರ್‌ ಶಿವಪುರ, ಜಿ.ಪಂ. ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ದಾನಿಗಳಾದ ಮುದ್ರಾಡಿ ಸುದೇಶ ಕಾಮತ್‌, ಹರಿಪ್ರಸಾದ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್‌, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ಕಾಪೋಳಿ ಶ್ರೀಧರ ಹೆಬ್ಬಾರ್‌ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!