Thursday, August 5, 2021
spot_img
Homeಸ್ಥಳೀಯ ಸುದ್ದಿಉಡುಪಿ ಜಿಲ್ಲೆಯಲ್ಲಿ ಅನ್‌ ಲಾಕ್‌ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಅನ್‌ ಲಾಕ್‌ ಘೋಷಣೆ

ಕಾರ್ಕಳ : ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಯಗಳಲ್ಲಿ ನಿಯಮ ಸಡಿಲಿಕೆಗೊಳಿಸಿ, ಸರಕಾರ ಜೂ. 21ರಂದು ಆದೇಶ ಹೊರಡಿಸಿದೆ. ಜು. 5ರ ತನಕ ಅನ್ವಯವಾಗುವಂತೆ ಎಲ್ಲ ಅಂಗಡಿಗಳು ಸಂಜೆ 5 ಗಂಟೆಯವರೆಗೆ ತೆರೆಯಬಹುದಾಗಿದೆ. ಎಸಿ ರಹಿತವಾಗಿ ಹೊಟೇಲ್‌, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಅವಕಾಶ ನೀಡಲಾಗಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಸ್‌ ಶೇ. 50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆ, ಸರಕಾರಿ-ಖಾಸಗಿ ಕಚೇರಿಗಳು, ಲಾಡ್ಜ್‌ ಮತ್ತು ರೆಸಾರ್ಟ್‌ಗಳು ಶೇ. 50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!