Saturday, December 4, 2021
spot_img
Homeಸ್ಥಳೀಯ ಸುದ್ದಿ30 ವರ್ಷಗಳ ಆಡಳಿತದಲ್ಲಿ ಕಾರ್ಕಳ ಕ್ಷೇತ್ರಕ್ಕೆ ಕಾಂಗ್ರೆಸ್‌ ಕೊಡುಗೆ ಏನು ?

30 ವರ್ಷಗಳ ಆಡಳಿತದಲ್ಲಿ ಕಾರ್ಕಳ ಕ್ಷೇತ್ರಕ್ಕೆ ಕಾಂಗ್ರೆಸ್‌ ಕೊಡುಗೆ ಏನು ?


ಕೊಡುಗೆ ಬಹಿರಂಗ ಪಡಿಸಿ ನಂತರ ಪ್ರತಿಭಟನೆ ನಡೆಸಿ- ಬಿಜೆಪಿ ಸವಾಲು

ಕಾರ್ಕಳ : ಕಾಂಗ್ರೆಸ್ಸಿನ ವ್ಯಕ್ತಿಯೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಕಾರ್ಕಳ ಕ್ಷೇತ್ರದಲ್ಲಿ ಎಳ್ಳಷ್ಟೂ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಈಗ ದಿನಕ್ಕೊಂದು ಕಾರಣ ಹುಡುಕಿಕೊಂಡು ಬೆರಳೆಣಿಕೆಯ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಗೆ ಪಾಟಲಿಗೀಡಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ ಅನ್ನು ಯಾರು ಕೂಡ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕಾರ್ಕಳ ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.

ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ
ನಿರಂತರ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳಿಂದ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ಬದಿಗೆ ಸರಿಸುತ್ತಿದ್ದಾರೆ. ಸದಾ ಸುಳ್ಳುಗಳನ್ನೇ ಬಿತ್ತರಿಸುತ್ತಾ ಅಪಪ್ರಚಾರ ಮಾಡಿ ರಾಜಕೀಯ ಲಾಭ ಪಡೆಯುವ ಕಾಂಗ್ರೆಸ್ಸಿನ ತಂತ್ರ ಫಲಿಸದಿದ್ದಾಗ ಪ್ರತಿಭಟನೆಯೇ ಕಾಯಕವಾಗಿಸಿದೆ. ಇದೊಂದು ಪಕ್ಷದ ಅಸ್ತಿತ್ವಕ್ಕಾಗಿ ನಡೆಯುತ್ತಿರುವ ಹೋರಾಟವೇ ಹೊರತು ಜನಪರ ಹೋರಾಟವಲ್ಲ.

ಕಾಂಗ್ರೆಸ್‌ನಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ
ಜನರ ದಿಕ್ಕು ತಪ್ಪಿಸುತ್ತಾ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಾಂಗ್ರೆಸ್ ಮೊದಲು ಅಭಿವೃದ್ಧಿ ಕೆಲಸಗಳನ್ನು ತಡೆಯುವ ಪ್ರಯತ್ನ ಮಾಡಿತ್ತು. ಅನಂತರ ಕಾರ್ಕಳ ರೈತರ ಮಹತ್ವಾಕಾಂಕ್ಷೆಯ ಯೋಜನೆಯಾದ ಬಿಳಿಬೆಂಡೆ ಬ್ರಾಂಡನ್ನು ವಿರೋಧಿಸಿತು. ಈ ರೀತಿ ಸದಾ ತನ್ನ ಮನೋವಿಕಲತೆಯನ್ನು ಪ್ರದರ್ಶಿಸುತ್ತಾ ಬಂದಿರುವ ಕಾಂಗ್ರೆಸ್ ವಿರುದ್ಧ ಜನರೇ ಸಿಡಿದೇಳಲಿದ್ದಾರೆ. ಕಾಂಗ್ರೆಸ್‍ಗೆ ನಿಜವಾಗಿಯೂ ಜನಪರ ಕಾಳಜಿ ಇರುತ್ತಿದ್ದರೆ ಕೊರೊನಾ ಸಂದರ್ಭದಲ್ಲಿ ಬೀದಿಗಿಳಿದು ಜನರಿಗೆ ಸಹಾಯ ಮಾಡಬೇಕಿತ್ತು. ಅದನ್ನು ಬಿಟ್ಟು ಈ ರೀತಿಯ ಪ್ರತಿಭಟನೆಗಳು ಕೇವಲ ಪ್ರಚಾರದ ಗಿಮಿಕ್ ಅಷ್ಟೇ. ಜನರಿಗೆ ಎಲ್ಲೂ ಕಾಣ ಸಿಗದ ಕಾಂಗ್ರೆಸ್ ಕೊನೆ ಪಕ್ಷ ಮಾಧ್ಯಮಗಳಲ್ಲಿಯಾದರೂ ಕಾಣಿಸಿಕೊಳ್ಳುವ ಶತ ಪ್ರಯತ್ನ ನಡೆಸುತ್ತಿದೆ ಎಂದು ಕಾರ್ಕಳ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!