Sunday, October 24, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ಶಾಸಕರ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜನೆ: ಪುರಸಭಾ ಸದಸ್ಯರಿಂದ ಸಾಮಾಜಿಕ ಜಾಲತಾಣದ ಮೂಲಕ ದೂರು

ಕಾರ್ಕಳ ಶಾಸಕರ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜನೆ: ಪುರಸಭಾ ಸದಸ್ಯರಿಂದ ಸಾಮಾಜಿಕ ಜಾಲತಾಣದ ಮೂಲಕ ದೂರು

ಕಾರ್ಕಳ : ಕಾರ್ಕಳ ಶಾಸಕರ ಕಚೇರಿಯಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ. ಇವರ ವಿರುದ್ಧ ಜಿಲ್ಲಾಧಿಕಾರಿಯವರು ಕ್ರಮ ವಹಿಸಬೇಕೆಂದು ಕಾಂಗ್ರೆಸ್‌ ಮುಖಂಡ, ಪುರಸಭಾ ಸದಸ್ಯ ಶುಭದ ರಾವ್‌ ಆಗ್ರಹಿಸಿದ್ದಾರೆ. ಕೋವಿಡ್‌ ನಿಯಮ ಯಾರೇ ಉಲ್ಲಂಘಿಸಿದ್ದರೂ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿಯವರು ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು. ಆದರೆ, ಗುರುವಾರ ಕಾರ್ಕಳ ಶಾಸಕರೇ ಕಾನೂನು ಉಲ್ಲಂಘಿಸಿ, ನೂರಾರು ಜನರನ್ನು ಸೇರಿಸಿ, ಕಾರ್ಯಕ್ರಮ ಆಯೋಜಿಸಿರುತ್ತಾರೆ. ಈ ಕುರಿತು ಯಾವುದೇ ಅಧಿಕಾರಿಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ತರುವುದಿಲ್ಲ. ಹೀಗಾದಲ್ಲಿ ಉಡುಪಿ ಜಿಲ್ಲೆಯಲ್ಲಿ ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವೇ ಎಂದು ಶುಭದ ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!