Thursday, August 18, 2022
spot_img
Homeಸ್ಥಳೀಯ ಸುದ್ದಿಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ 40 ಸಾವಿರ ಮಕ್ಕಳ ಆರೋಗ್ಯ ತಪಾಸಣೆ- ಸುನಿಲ್‌ ಕುಮಾರ್‌

ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ 40 ಸಾವಿರ ಮಕ್ಕಳ ಆರೋಗ್ಯ ತಪಾಸಣೆ- ಸುನಿಲ್‌ ಕುಮಾರ್‌

ಕಾರ್ಕಳ : ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ಕಾರ್ಕಳ ಹೆಬ್ರಿ ತಾಲೂಕಿನ 15 ವರ್ಷದೊಳಗಿನ ಮಕ್ಕಳಿಗೆ ವಾತ್ಸಲ್ಯ ಹೆಸರಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.
ಗುರುವಾರ ನ್ಯೂಸ್‌ ಕಾರ್ಕಳಕ್ಕೆ ಮಾಹಿತಿ ನೀಡಿದ ಶಾಸಕರು, ಆರೋಗ್ಯ ಇಲಾಖೆ, ಉಭಯ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ಪ್ರತಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಪ್ರತಿದಿನ 10 ಕೇಂದ್ರಗಳಲ್ಲಿ ತಪಾಸಣೆ ನಡೆಯಲಿದ್ದು, ಉಭಯ ತಾಲೂಕಿನ ಸುಮಾರು 40 ಸಾವಿರ ಮಕ್ಕಳನ್ನು ತಪಾಸಣೆಗೊಳಪಡಿಸಲಾಗುವುದು ಎಂದರು.

ಆಕ್ಸಿಜನ್‌ ಘಟಕಕ್ಕೆ ಚಾಲನೆ
ಹೆಬ್ರಿ ಹಾಗೂ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಆಕ್ಸಿಜನ್‌ ಘಟಕವು ಜುಲೈ ತಿಂಗಳಲ್ಲಿ ಲೋಕಾರ್ಪಣೆಗೊಂಡು ಸಾರ್ವಜನಿಕರ ಪ್ರಯೋಜನಕ್ಕೆ ಲಭ್ಯವಾಗಲಿದೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ಸುಮಿತ್‌ ಶೆಟ್ಟಿ ಕೌಡೂರು, ಉದಯ ಎಸ್.‌ ಕೋಟ್ಯಾನ್‌ ಈ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!