Saturday, July 24, 2021
spot_img
Homeರಾಜ್ಯಶಾಲೆಗಳ ಆರಂಭ ಕುರಿತು ಸೋಮವಾರ ಅಂತಿಮ ತೀರ್ಮಾನ- ಸುರೇಶ್ ಕುಮಾರ್

ಶಾಲೆಗಳ ಆರಂಭ ಕುರಿತು ಸೋಮವಾರ ಅಂತಿಮ ತೀರ್ಮಾನ- ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ  ಆರಂಭದ ಬಗ್ಗೆ ಸೋಮವಾರ  ತಜ್ಞರ ಸಭೆ ಕರೆಯಲಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಸದ್ಯಕ್ಕೆ ವಿದ್ಯಾಗಮದ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ, ಕಲಿಕಾ ದಿನಚರಿ ಬಗ್ಗೆ ಯೋಜನೆ ಮಾಡಿದ್ದೇವೆ. ಶಾಲಾ ಆರಂಭದ ಬಗ್ಗೆ ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಖಾಸಗಿ ಶಾಲಾ ಶುಲ್ಕ ಕುರಿತಂತೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪಿನ ಆ ನಂತರ ಚರ್ಚಿಸಿ ಅಂತಿಮ ಕ್ರಮ ಕೈಗೊಳ್ಳವುದಾಗಿ  ಹೇಳಿದರು. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!