ಕಾರ್ಕಳ : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಸರಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ. ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24/7 ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು / ಕಂಪನಿ / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ದೂರವಾಣಿ ಮತ್ತು ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ರೋಗಿಗಳು ಮತ್ತು ಅವರ ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ತೆರಳುವವರು ಕನಿಷ್ಠ ದಾಖಲೆಯೊಂದಿಗೆ ಸಂಚರಿಸಲು ಅನುಮತಿಸಿದೆ. ಅಗತ್ಯ ವಸ್ತು ಖರೀದಿಗೆ ಬೆಳಿಗ್ಗೆ 6 ರಿಂದ ಅಪರಾಹ್ನ 2ರ ವರೆಗೆ ಅವಕಾಶವಿರಲಿದೆ. ಹೊಟೇಲ್ಗಳಲ್ಲಿ ಆಹಾರವನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಬಸ್ ಸೇವೆ, ರೈಲು, ವಿಮಾನ ಪ್ರಯಾಣ ಅನುಮತಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮವನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು / ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ನಡೆಸಲು ಅನುಮತಿಸಲಾಗಿದೆ. ಶವಸಂಸ್ಕಾರ / ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


























