ಕಾರ್ಕಳ : ಸಮಾಜದ ಸ್ವಾಸ್ಥ್ಯ ಸಂಪೂರ್ಣ ಕೆಡಿಸುವಂತಹ ಕೊರೊನಾದಂತಹ ಕಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಣಿಪಾಲ ಸಮೂಹ ಸಂಸ್ಥೆಗಳು ಸರಕಾರದೊಂದಿಗೆ ಕೈಜೋಡಿಸಿದ ರೀತಿ ಅನನ್ಯವಾದುದು. ತಮ್ಮ ಹಾಗೂ ತಮ್ಮ ಅಧೀನದ ಅನೇಕ ಸಂಸ್ಥೆಗಳನ್ನು ಕೋವಿಡ್ ನಿರ್ವಹಣೆಗಾಗಿ ಮೀಸಲಿರಿಸಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಂತ ಮಣಿಪಾಲ ಸಂಸ್ಥೆ ಹಾಗೂ ಭುವನೇಂದ್ರ ಕಾಲೇಜಿನ ಸೇವೆ ಸ್ಮರಣೀಯವೆಂದು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಜೂ.28ರಂದು ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಾಣಬಹುದಾದ ಎರಡು ಮುಖಗಳೆಂದರೆ ಕಲಿಕೆ ಮತ್ತು ಜೀವನದ ಅನುಭವ. ಇವೆರಡನ್ನು ಸಮತೋಲಿತವಾಗಿ ನಡೆಸಿಕೊಂಡು ಹೋದಲ್ಲಿ ಯಶಸ್ಸು ಖಂಡಿತ. ಕೇವಲ ಸಂಪಾದನೆಯೊಂದೇ ಯಶಸ್ಸಲ್ಲ ಎಂದವರು ಕಿವಿಮಾತು ಹೇಳಿದರು.
ಶಾಸಕ ವಿ. ಸುನಿಲ್ ಕುಮಾರ್, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಕೋಟ್ಯಾನ್ ಸ್ವಾಗತಿಸಿ, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಈಶ್ವರ ಭಟ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಭುವನೇಂದ್ರ ಕಾಲೇಜಿನಲ್ಲಿ ಲಸಿಕಾ ಅಭಿಯಾನಕ್ಕೆ ಗೃಹ ಸಚಿವರಿಂದ ಚಾಲನೆ
Recent Comments
ಕಗ್ಗದ ಸಂದೇಶ
on