Sunday, October 24, 2021
spot_img
Homeಸ್ಥಳೀಯ ಸುದ್ದಿಉಡುಪಿ ಅತಿ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆ - ಬೊಮ್ಮಾಯಿ

ಉಡುಪಿ ಅತಿ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆ – ಬೊಮ್ಮಾಯಿ

ಕಾರ್ಕಳ : ದೂರದ ಹಳ್ಳಿಗಳಿಂದ ನಗರಕ್ಕೆ ಬಂದು ವಿದ್ಯಾಭ್ಯಾಸ ನಡೆಸುವ ಮಕ್ಕಳ ಅನುಕೂಲಕ್ಕಾಗಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಅವರು ಜೂ. 28ರಂದು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ನೂತನ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳು ನಿಷ್ಠೆಯಿಂದ ಕಲಿತು ಮುಂದೆ ಬಂದರೆ ಅವರು ಶಿಕ್ಷಕಿಯಾಗಿ, ರಕ್ಷಕಿಯಾಗಿ ಪೋಷಕಿಯಾಗಿ ನಾಡನ್ನು ಅಭಿವೃದ್ಧಿಪಡಿಸುವರು. ಸಮಾಜದ ನಿರ್ಮಾಣದಲ್ಲಿ ಹೆಣ್ಣಿನ ಪಾತ್ರ ವೈಶಿಷ್ಟ್ಯಪೂರ್ಣವಾದುದು. ರಾಜ್ಯದಲ್ಲಿ ಉಡುಪಿ ಜಿಲ್ಲೆ ಅತಿ ಹೆಚ್ಚು ಸುಶಿಕ್ಷಿತರನ್ನು ಹೊಂದಿದ ಜಿಲ್ಲೆಯಾಗಿದೆ. ಆದರೂ ಇಲ್ಲಿ ಹಲವು ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವಿ. ಸುನೀಲ್ ಕುಮಾರ್, ದೂರದ ಊರಿನಿಂದ ಬರುವ ಮಕ್ಕಳಿಗೆ ಹಾಸ್ಟೇಲ್‌ಗಳಲ್ಲಿ ಶೈಕ್ಷಣಿಕ ಸೌಲಭ್ಯಗಳಿಲ್ಲ ಎಂಬ ದೂರು ಆಗಾಗ ಕೇಳಿ ಬರುತ್ತಿತ್ತು. ಈಗ ತಾಲ್ಲೂಕಿಗೆ ಬರುವ ಮಕ್ಕಳಲ್ಲಿ ಓದುವ ಸದಭಿರುಚಿಯನ್ನು ಹೆಚ್ಚಿಸಿ ಇನ್ನಷ್ಟು ಮಕ್ಕಳನ್ನು ಆಕರ್ಷಿಸುವಲ್ಲಿ ಈ ನೂತನ ಕಟ್ಟಡದಿಂದ ಆಗಲಿ ಎಂದರು.

ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್‌ಪಿ ಎನ್. ವಿಷ್ಣುವರ್ಧನ್, ನಕ್ಸಲ್ ವಿಭಾಗದ ನಿಖಿಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಪುರಸಭೆಯ ಅಧ್ಯಕ್ಷೆ ಸುಮಾಕೇಶವ್, ತಹಶೀಲ್ದಾರ್ ಪುರಂದರ ಹೆಗ್ಡೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್, ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಯೋಜನಾ ಅಭಿಯಂತರ ಪವನ್, ನಿಲಯ ಮೇಲ್ವಿಚಾರಕಿ ಎಚ್. ಎನ್. ನಾಗಶ್ರೀ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ವಿಜಯ ಕುಮಾರ್ ಸ್ವಾಗತಿಸಿದರು. ನವೀನ್ ನಾಯಕ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!