Tuesday, August 3, 2021
spot_img
Homeರಾಜ್ಯಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಇಂದು ಮಧ್ಯಾಹ್ನ 12 ಗಂಟೆಗೆ ಹೊರಬೀಳಲಿದೆ. ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು ಈ ಸಂಬಂಧ ಇಂದು ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಎಲ್ಲಾ ಜಿಲ್ಲಾ ಡಿಸಿ, ಸಿಇಒ, ಡಿಡಿಪಿಐ, ಡಿಎಚ್‌ ಒ, ಎಸ್‌ಪಿಗಳ ಜೊತೆ ವಿಡಿಯೋ ಕಾನರೆನ್ಸ್‌ ಮೂಲಕ ಸಭೆ ನಡೆಯಲಿದೆ. ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ.
ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಪರೀಕ್ಷಾ ಸಮಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪೂರ್ವ ಸಿದ್ದತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!