Saturday, December 4, 2021
spot_img
Homeರಾಜ್ಯಪಿಂಚಣಿದಾರರ ಪತ್ತೆಗೆ ಮೊಬೈಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ಪಿಂಚಣಿದಾರರ ಪತ್ತೆಗೆ ಮೊಬೈಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ: ಹೈಕೋರ್ಟ್’ಗೆ ಸರ್ಕಾರ ಮಾಹಿತಿ

ಬೆಂಗಳೂರು: ಫಲಾನುಭವಿಗಳ ಗುರ್ತಿಸಲು ರಾಜ್ಯ ಸರ್ಕಾರ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ್ದು, ಪಿಂಚಣಿ ಪಡೆಯಲು ಪಿಂಚಣಿದಾರರು ಯಾವುದೇ ಕಚೇರಿಗೂ ಭೇಟ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್’ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. 

ಸಂಧ್ಯಾ ಸುರಕ್ಷಾ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ ಸಿಗುತ್ತಿಲ್ಲ ಎಂದು ಆಕ್ಷೇಪಿಸಿ ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು. 

ಈ ಸಂಬಂಧ ಅಫಿಡವಿಟ್‌ ಸಲ್ಲಿಸಿದ ಕಂದಾಯ ಇಲಾಖೆ ಉಪ ನಿರ್ದೇಶಕಿ (ಸಾಮಾಜಿಕ ಭದ್ರತೆ ಮತ್ತು ಪಿಂಚಣಿ) ಡಾ. ಎಸ್. ಸವಿತಾ ಅವರು, ನ್ಯಾಯಾಲಯ ಈ ಹಿಂದೆ ನೀಡಿದ್ದ ಆದೇಶಗಳ ಅನುಪಾಲನಾ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ಹಿರಿಯ ನಾಗರಿಕರಿಗೆ ಜೀವಿತ ಪ್ರಮಾಣಪತ್ರ ಕೇಳುತ್ತಿಲ್ಲ. 2021ರ ಮೇ ವರೆಗೆ ಎಲ್ಲ ಹಿರಿಯ ನಾಗರಿಕರಿಗೆ ಪಿಂಚಣಿ ಮತ್ತು ವೃದ್ಧಾಪ್ಯ ವೇತನ ಪಾವತಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯಲು ಹಿರಿಯ ನಾಗರಿಕರು ಒಂದು ಕಚೇರಿಯಿಂದ ಮೊತ್ತೊಂದು ಕಚೇರಿಗೆ ಅಥವಾ ಬ್ಯಾಂಕುಗಳಿಗೆ ಭೇಟಿ ಕೊಡುವಂತಿಲ್ಲ ಎಂದು ವಿವರಿಸಿದರು.

ಪಿಂಚಣಿದಾರರನ್ನು ಸ್ವಯಂ ಪ್ರೇರಿತವಾಗಿ ಗುರುತಿಸಲು ‘ನವೋದಯ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಲೆಕ್ಕಿಗರು ಫಲಾನುಭವಿಗಳ ಮನೆ ಬಾಗಿಲಿಗೆ ಭೇಟಿ ನೀಡಿ ಅವರ ಭಾವಚಿತ್ರ ಸಹಿತ ಮಾಹಿತಿಗಳನ್ನು ಸಂಗ್ರಹಿಸಿ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆಂದು ತಿಳಿಸಿದರು. 

ಹೇಳಿಕೆ ದಾಖಲಿಸಿಕೊಂಡ ಪೀಠ,ಪಿಂಚಣಿದಾರರು ಬದುಕಿರುವ ಬಗ್ಗೆ ಪ್ರತಿವರ್ಷ ಪ್ರಮಾಣ ಪತ್ರ ಸಲ್ಲಿಸಬೇಕು ಮತ್ತು ಬ್ಯಾಂಕ್‌ಗಳಿಗೆ ಹಾಜರಾಗಬೇಕು. ಹಿರಿಯ ನಾಗರಿಕರನ್ನು ಬ್ಯಾಂಕ್ ಮತ್ತು ಕಚೇರಿಗಳಿಗೆ ಸುತ್ತಾಡಿಸುವುದು ಸರಿಯೇ’ ಎಂದು ಪ್ರಶ್ನಿಸಿತು.

ಅಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯಲು ಹಿರಿಯ ನಾಗರಿಕರು ಒಂದು ಕಚೇರಿಯಿಂದ ಮೊತ್ತೊಂದು ಕಚೇರಿಗೆ ಅಥವಾ ಬ್ಯಾಂಕುಗಳಿಗೆ ಭೇಟಿ ಕೊಡುವಂತಿಲ್ಲ ಎಂಬ ಬಗ್ಗೆ ಖಚಿತ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!