Tuesday, August 3, 2021
spot_img
Homeರಾಜ್ಯಲಸಿಕೀಕರಣ ಮುಗಿದ ನಂತರ ಕಾಲೇಜು ಆರಂಭ ಕುರಿತು ನಿರ್ಧಾರ: ಅಶ್ವಥ್‌ ನಾರಾಯಣ

ಲಸಿಕೀಕರಣ ಮುಗಿದ ನಂತರ ಕಾಲೇಜು ಆರಂಭ ಕುರಿತು ನಿರ್ಧಾರ: ಅಶ್ವಥ್‌ ನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7 ರೊಳಗೆ ಲಸಿಕೀಕರಣವನ್ನು ಮುಗಿಸಲು ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ. ಎನ್‌ ಅಶ್ವಥ್‌ ನಾರಾಯಣ ಎಲ್ಲಾ ವಿವಿಧ ಕುಲಪತಿಗಳಿಗೆ ನಿರ್ದೇಶನ ನೀಡಿದರು.
ಕೋವಿಡ್‌ ಲಸಿಕೆಯನ್ನು ಹೆಚ್ಚು ತ್ವರಿತವಾಗಿ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಜತೆ ಗುರುವಾರ ವಿಡಿಯೋ ಸಂವಾದ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯದ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ. 50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕೆಯಾಗುವ ಲಸಿಕೆಯನ್ನು ಸಂಬಂಧಿಸಿದೆ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಪಡೆದುಕೊಳ್ಳಬೇಕು ಎಂದರು.
ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು. ಈ ಹಿನ್ನಲೆಯಲ್ಲಿ ಲಸಿಕೆಯೇ ಪರಿಹಾರ. ಇದನ್ನು ಎಲ್ಲ ಕುಲಪತಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಡಿಸಿಎಂ ಹೇಳಿದರು. ಎಲ್ಲ ವಿವಿಗಳಲ್ಲಿ ಲಸಿಕೀಕರಣ ಮುಗಿದ ನಂತರ ನೇರ ತರಗತಿಗಳನ್ನು ಆರಂಭ ಮಾಡುವ ಕುರಿತು ನಿರ್ದರಿಸಲಾಗುವುದು, ಈಗ ನಡೆಯುತ್ತಿರುವ ಆನ್‌ಲೈನ್‌ ತರಗತಿಗಳು ಅಬಾಧಿತ ಎಂದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!