ಜಾಗೃತಿ ಫೌಂಡೇಶನ್ ಸಂಸ್ಥೆಯಿಂದ ರಾಜ್ಯ ಮಟ್ಟದ ಪರಿಸರ ಉತ್ಸವ

ಕಾರ್ಕಳದ ಜಾಗೃತಿ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಸಂಯುಕ್ತ ಆಶ್ರಯದಲ್ಲಿ ರಾಜ್ಯದ 6090 ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರಿನ ವಿಧಾನ ಸೌಧದ ಪಂಚಾಯತ್ ರಾಜ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಅವರು ರಾಜ್ಯದ ಎಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸಸಿ ನೆಟ್ಟು ಪೋಷಣೆ ಮಾಡುವ ಈ ಕಾರ್ಯ ಶ್ಲಾಘನೀಯ. ಜಾಗೃತಿ ಫೌಂಡೇಶನ್ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಪ್ರತೀ ಪಂಚಾಯತ್ ಅಭಿವೃದ್ಧಿ ಇಲಾಖೆಯ ನೌಕರರು ಕನಿಷ್ಟ ಎರಡು ಗಿಡ ನೆಟ್ಟು ಪೋಷಣೆ ಮಾಡಲು ನಿರ್ದೇಶನ ನೀಡಲಾಗಿದೆ. ರಾಜ್ಯದಾದ್ಯಂತ 13,000 ಗಿಡಗಳನ್ನು ನೆಡುವ ಕಾರ್ಯಕ್ರಮ ಇದಾಗಿದೆ ಎಂದರು.
ಜಾಗೃತಿ ಫೌಂಡೇಶನ್, ಕಾರ್ಕಳದ ಸಂಚಾಲಕ ಸಿಯಾ ಸಂತೋಷ ನಾಯಕ್ ಅವರು ಸ್ವಾಗತ ಮಾಡಿದರು. ಪ್ರಧಾನ ಕಾರ್ಯದರ್ಶಿ ಎಲ್.ಕೆ ಆತೀಕ್, ಪಂಚಾಯತ್ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಹೆಚ್. ಬೋರಯ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಮತ್ತು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.





























































































































































































































error: Content is protected !!
Scroll to Top