ಮಕ್ಕಳ ಆರೋಗ್ಯ ತಪಾಸಣಾ ಶಿಬಿರದ ಕುರಿತು ಪೂರ್ವಭಾವಿ ಸಭೆ

ಕಾರ್ಕಳ : ಕಾರ್ಕಳ ಕ್ಷೇತ್ರದ 15 ವರ್ಷದೊಳಗಿನ ಸುಮಾರು 40 ಸಾವಿರ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ವಾತ್ಸಲ್ಯ ಕಾರ್ಯಕ್ರಮ ಅನುಷ್ಠಾನದ ಕುರಿತು ಶಾಸಕ ವಿ. ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಪೂರ್ವಭಾವಿ ಸಭೆ ಶಾಸಕರ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಕ್ಕಳ ಆರೋಗ್ಯ ತಪಾಸಣೆಯ ಶಿಬಿರವನ್ನು ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಸಲಾಗುತ್ತಿದ್ದು ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಸಮನ್ವಯ ಸಾಧಿಸಿಕೊಂಡು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಯಶಸ್ವಿಗೊಳಿಸುವಂತೆ ತಿಳಿಸಿದರು. ಶಿಬಿರಕ್ಕೆ ಅವಶ್ಯವಿರುವ ಅಗತ್ಯ ಔಷಧಿ, ಪರಿಕರ ಮತ್ತು ಪೌಷ್ಠಿಕಾಂಶಯುಕ್ತ ಆಹಾರ ಸಾಮಗ್ರಿ ಕಿಟ್‍ಗಳನ್ನು ಒದಗಿಸುವ ಬಗ್ಗೆಯೂ ಪೂರ್ವ ತಯಾರಿ ನಡೆಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನೋಡಲ್ ಅಧಿಕಾರಿಯವರಾದ ಕುಂದಾಪುರ ಸಹಾಯಕ ಕಮಿಷನರ್ ಕೆ. ರಾಜು, ಕಾರ್ಕಳ ತಹಶೀಲ್ದಾರ್ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಪುರಂದರ ಕೆ., ತಾಲೂಕು ವೈದ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹರೀಶ್ ನಾಯಕ್ ಉಪಸ್ಥಿತರಿದ್ದರು.





























































































































































































































error: Content is protected !!
Scroll to Top