Tuesday, December 7, 2021
spot_img
Homeರಾಜ್ಯಆಪ್ತ ಸಹಾಯಕನ ಬಂಧನವಾಗುವವರೆಗೆ ನನಗೆ ಮಾಹಿತಿ ಇರಲಿಲ್ಲ:ಬಿ.ವೈ. ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

ಆಪ್ತ ಸಹಾಯಕನ ಬಂಧನವಾಗುವವರೆಗೆ ನನಗೆ ಮಾಹಿತಿ ಇರಲಿಲ್ಲ:ಬಿ.ವೈ. ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

ವಿಧಾನಸೌಧ: ತಮ್ಮ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವರು ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ, ನನ್ನ ಬಳಿ ಕೆಲಸಕ್ಕಿದ್ದ ರಾಜಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದೆ, ತನಿಖೆ ಕೂಡ ನಡೆಯುತ್ತಿದೆ, ಹೀಗಾಗಿ ನಾನು ಹೆಚ್ಚಿಗೆ ಮಾತನಾಡಲು, ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

ರಾಜಣ್ಣ ನನಗೆ ಗೊತ್ತಿರುವ ಹುಡುಗ, ನನ್ನ ಬಳಿಯೇ ಕೆಲಸ ಮಾಡುತ್ತಿದ್ದ, ಹಾಗೆಂದು ಅಧಿಕೃತವಾಗಿ ನನ್ನ ಕಚೇರಿಯಲ್ಲಿ ಕೆಲಸಕ್ಕೆ ಇದ್ದವನಲ್ಲ, ನಿನ್ನೆ ಆತನನ್ನು ನನ್ನ ನಿವಾಸಕ್ಕೆ ಬಂದು ಪೊಲೀಸರು ಬಂಧಿಸುವವರೆಗೆ ನನಗೆ ಯಾವುದೇ ಮಾಹಿತಿಯಿರಲಿಲ್ಲ ಎಂದರು.

ನನಗೆ ಮೊದಲೇ ಮಾಹಿತಿ ಇದ್ದಿದ್ದರೆ ಈ ಬಗ್ಗೆ ವಿಜಯೇಂದ್ರ ಅವರಲ್ಲಿ ಮಾತನಾಡಿ ಸರಿಪಡಿಸುತ್ತಿದ್ದೆ, ರಾಜುನನ್ನು ಕರೆದು ಕೇಳುತ್ತಿದ್ದೆ, ನನಗೆ ಮೊದಲೇ ಮಾಹಿತಿ ನೀಡಬೇಕಾಗಿದ್ದು, ಬಂಧನ ಆಗುವವರೆಗೆ ನನಗೆ ಈ ಬಗ್ಗೆ ಒಂಚೂರು ಮಾಹಿತಿ ಇರಲಿಲ್ಲ, ಈ ವಿಷಯದಲ್ಲಿ ತಪ್ಪು ಸಂವಹನ ನಡೆದಿದೆ, ತಮ್ಮ ಗಮನಕ್ಕೆ ತಾರದೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಿದರು.

ಈ ಪ್ರಕರಣ ಬಗ್ಗೆ ಸಿಎಂ ಯಡಿಯೂರಪ್ಪ  ಮತ್ತು ಅವರ ಪುತ್ರ ವಿಜಯೇಂದ್ರ ಬಳಿ ಮಾತನಾಡುತ್ತೇನೆ. ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದು ಶ್ರೀರಾಮುಲು ಹೇಳಿದರು.

ಮುಖ್ಯಮಂತ್ರಿಗಳ ಪುತ್ರ ವಿಜಯೇಂದ್ರ ತಂದೆಯ ಮತ್ತು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ, ಹಲವು ಸಚಿವರುಗಳಿಗೆ ಬೆಲೆಯೇ ಇಲ್ಲದಂತಾಗಿದೆ, ನಾಯಕತ್ವ ಬದಲಾವಣೆಯಾಗಬೇಕು ಎಂಬ ಕೂಗು ಆಗಾಗ ಕೇಳಿಬರುತ್ತಲೇ ಇರುತ್ತದೆ.

ಇದಕ್ಕೆ ಪುಷ್ಠಿ ನೀಡುವ ರೀತಿಯಲ್ಲಿ ಇಂದು ಸಚಿವ ಶ್ರೀರಾಮುಲು ಮಾತಿನ ಧಾಟಿಯಿತ್ತು. ವಿಜಯೇಂದ್ರ ಅವರು ತಮ್ಮ ಗಮನಕ್ಕೆ ಬಾರದೆ ದೂರು ನೀಡಿದ್ದಾರೆ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!