Tuesday, August 3, 2021
spot_img
Homeಸ್ಥಳೀಯ ಸುದ್ದಿನಿಟ್ಟೆ : ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ನಿಟ್ಟೆ : ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕಾರ್ಕಳ : ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಜು. 6ರಂದು ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಲಾಯಿತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್, ಕೋವಿಡ್‌ ನಿರ್ವಹಣೆಯಲ್ಲಿ ಕಾರ್ಕಳ ಶಾಸಕರ ಕಾರ್ಯಶೈಖರಿ ಮಹತ್ತರವಾದುದು. ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಅವುಗಳಲ್ಲಿ ಮುಖ್ಯವಾದುದು ಎಂದರು.
ನಿಟ್ಟೆ ವಿದ್ಯಾಸಂಸ್ಥೆಯ ರಿಜಿಸ್ಟ್ರಾರ್ ಯೋಗೀಶ ಹೆಗ್ಡೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ವಾತ್ಸಲ್ಯ ಕಾರ್ಯಕ್ರಮದ ಸಂಯೋಜಕರಾದ ಜಿ.ಪಂ. ಮಾಜಿ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ರೇಷ್ಮಾ ಉದಯ್ ಶೆಟ್ಟಿ, ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ನಿರಂಜನ್ ಎನ್. ಚಿಪ್ಲೂಣ್ಕರ್, ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹರೀಶ್ ಆಚಾರ್ಯ, ಡಾ. ಸುರೇಶ್ ಕುಡ್ವ, ಡಾ. ನಂಜೇಶ್, ನಿಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ಸುಮಿತ್ರಾ, ಲಕ್ಷ್ಮಣ್ ಆಚಾರ್ಯ, ನವೀನ್ ನಾಯಕ್, ಜಯರಾಂ ಸಾಲಿಯಾನ್, ಪ್ರವೀಣ್ ಸಾಲಿಯನ್, ಹರ್ಷವರ್ಧನ ನಿಟ್ಟೆ, ಬಾಲಕೃಷ್ಣ ಹೆಗ್ಡೆ‌ ಮೊದಲಾದವರು ಉಪಸ್ಥಿತರಿದ್ದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ವೈದ್ಯರ 7 ತಂಡಗಳಿದ್ದು, ಒಟ್ಟು 202 ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು. ಬಳಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!