Saturday, July 24, 2021
spot_img
Homeರಾಜ್ಯಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌ ನೇಮಕ

ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌ ನೇಮಕ

ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ.
ಹಾಲಿ ರಾಜ್ಯಪಾಲ ವಜುಬಾಯಿವಾಲ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ತಾವರ್‌ಚಂದ್ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ.
ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ಈಗ ರಾಜ್ಯಸಭೆಯ ಸದಸ್ಯರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!