ಜು. 10 : ಸಚಿವ ಅರವಿಂದ ಲಿಂಬಾವಳಿ ಕಾರ್ಕಳ ಭೇಟಿ

ನಲ್ಲೂರು ಗ್ರಾಮದಲ್ಲಿ ರೂ. 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೃಕ್ಷೋಧ್ಯಾನ ಕಾಮಗಾರಿಗೆ ಶಿಲಾನ್ಯಾಸ

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ಜು. 10ರಂದು ಕಾರ್ಕಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ಕಾರ್ಕಳ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜು. 10ರಂದು ಮಧ್ಯಾಹ್ನ ಹೆಬ್ರಿ ಸಾಲುಮರದ ತಿಮ್ಮಕ್ಕ ವೃಕ್ಷೋಧ್ಯಾನದ ಉದ್ಘಾಟನೆ. ಕಾರ್ಕಳ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ, ಬಳಿಕ ಕಾರ್ಕಳ ಕೋಟಿ ಚೆನ್ನಯ ಥೀಂ ಪಾರ್ಕ್‍ಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ದಿ ಕೆಲಸ ಹಾಗೂ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಜು. 11ರಂದು ನಲ್ಲೂರು ಗ್ರಾಮದ ಚೆಂಡೆ ಹರಿಯಪ್ಪನ ಕೆರೆ ಬಳಿ 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಾಲುಮರದ ತಿಮ್ಮಕ್ಕ ವೃಕ್ಷೋಧ್ಯಾನದ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಮುಂದಿನ ಯುವ ಪೀಳಿಗೆಗೆ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಮಹತ್ವ ಬಗೆಗೆ ಅರಿವು ಮೂಡಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಈ ವೃಕ್ಷೋಧ್ಯಾನವು ಮಕ್ಕಳ ಉದ್ಯಾನವನ ಹಾಗೂ ಔಷಧೀಯ ಗುಣಗಳುಳ್ಳ ಗಿಡಮೂಲಿಕೆಗಳನ್ನು ಒಳಗೊಂಡಿದೆ. ಅನಂತರ ಪರಿಸರ ಉತ್ಸವ ಇದರ ಅಂಗವಾಗಿ ಮಿಯ್ಯಾರು ಲವ-ಕುಶ ಕಂಬಳ ಆವರಣದಲ್ಲಿ ನಡೆಯಲಿರುವ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಲಿದ್ದು, 34 ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಏಕಕಾಲದಲ್ಲಿ ಗಿಡ ನೆಡುವ ಮೂಲಕ ಪರಿಸರ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಕಳ ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.



































































































































































































































































error: Content is protected !!
Scroll to Top