Thursday, August 5, 2021
spot_img
Homeಸ್ಥಳೀಯ ಸುದ್ದಿಉಡುಪಿ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ

ಉಡುಪಿ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ

ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ರಾಜೀನಾಮೆ

ಕಾರ್ಕಳ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಸಚಿವ ಸ್ಥಾನ ಖಚಿತವಾಗಿದೆ. ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ ಅವರು ಮೋದಿಯನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ. ಶೋಭಾ ಕರಂದ್ಲಾಜೆ, ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್‌ ಸೇರಿದಂತೆ ಐವರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಂಪುಟ ಪನರ್‌ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಸಂತೋಷ್‌ ಗಂಗ್ವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಅವರು ಉಡುಪಿಯಿಂದ ಎರಡನೇ ಅವಧಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು. ಪುತ್ತೂರು ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಶೋಭಾ ಕರಂದ್ಲಾಜೆ ಅವರು ಹೋರಾಟದ ಮೂಲಕವೇ ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. 2004ರಲ್ಲಿ ವಿಧಾನ ಪರಿಷತ್‌ ಸದಸ್ಯೆಯಾಗಿ ಆಯ್ಕೆಯಾದ ಬಳಿಕ ಹಂತ ಹಂತವಾಗಿ ರಾಜಕೀಯವಾಗಿ ಬೆಳೆದ ಶೋಭಾ 2008ರಲ್ಲಿ ಯಶವಂತಪುರ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಇಂಧನ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾಗಿಯೂ ಖಾತೆ ನಿಭಾಯಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!