Saturday, December 4, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುವುದು. ಯುವಸಮುದಾಯ ರಕ್ತದಾನದ ಮಹತ್ವ ಅರಿತು ರಕ್ತದಾನ ಮಾಡಲು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ. ಅನಂತ ಕಾಮತ್ ಅಭಿಪ್ರಾಯಪಟ್ಟರು.
ಅವರು ರವಿವಾರ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಇದರ ವತಿಯಿಂದ ಹೋಟೆಲ್ ವಿಕಾಸ್‌, ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ರಕ್ತನಿಧಿ ಕೇಂದ್ರ ಕುಂದಾಪುರ ಇವುಗಳ ಸಹಯೋಗದೊಂದಿಗೆ ಎಸ್‌ವಿಟಿ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆಯ ಚೇರ್ಮನ್ ಕೆ. ರಾಮಚಂದ್ರ ಜೋಶಿ, ರೆಡ್‌ ಕ್ರಾಸ್‌ ಸಂಸ್ಥೆ ವತಿಯಿಂದ ನಿರಂತರವಾಗಿ ರಕ್ತದಾನ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರಲಾಗಿದೆ. ಮುಂದಿನ ದಿನಗಳಲ್ಲೂ ಕಾರ್ಕಳದ ಸಂಘ-ಸಂಸ್ಥೆಗಳ ಸಹಕಾರ ಪಡೆದು ತಿಂಗಳಿಗೊಂದರಂತೆ ರಕ್ತದಾನ ಶಿಬಿರ ಆಯೋಜಿಸಲಾಗುವುದು ಎಂದರು.
ಕುಂದಾಪುರ ರಕ್ತನಿಧಿ ಕೇಂದ್ರದ ಡಾ. ಶರಣ್, ವಿಕಾಸ್ ಹೋಟೆಲ್ ಮಾಲಕ ಶಂಕರ್ ದೇವಾಡಿಗ, ರೆಡ್‌ ಕ್ರಾಸ್ ಕಾರ್ಕಳ ಶಾಖೆಯ ಕಾರ್ಯದರ್ಶಿ ವೃಷಭರಾಜ್‌ ಕಡಂಬ,‌ ಖಜಾಂಜಿ ಐ. ರವೀಂದ್ರ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೀತಾ ಕಾಮತ್ ಪ್ರಾರ್ಥಿಸಿ, ಪದ್ಮಪ್ರಸಾದ್ ಜೈನ್ ಸ್ವಾಗತಿಸಿದರು. ಶೇಖರ್ ಹೆಚ್. ಕಾರ್ಯಕ್ರಮ ನಿರೂಪಿಸಿ, ಶಿವಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!