Saturday, July 24, 2021
spot_img
HomeUncategorizedಕೋವಿಡ್‌ನಿಂದ ರೈತರ ಸಾವು: 10 ಸಾವಿರ ಕೃಷಿಕರ 79.47 ಕೋಟಿ ರೂ. ಸಾಲ ಮನ್ನಾ

ಕೋವಿಡ್‌ನಿಂದ ರೈತರ ಸಾವು: 10 ಸಾವಿರ ಕೃಷಿಕರ 79.47 ಕೋಟಿ ರೂ. ಸಾಲ ಮನ್ನಾ

ಬೆಂಗಳೂರು: ಅಪೆಕ್ಸ್‌, ಡಿಸಿಸಿ ಬ್ಯಾಂಕ್‌ ಪ್ಯಾಕ್ಸ್‌ಗಳಲ್ಲಿ ಸಾಲ ಪಡೆದಿದ್ದ, ಕೊರೊನಾದಿಂದ ಮೃತಪಟ್ಟಿರುವ 10,187 ರೈತರ ರೂ. 79.47 ಕೋಟಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು 3-4 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ ಹೇಳಿದರು.


ಈ ಸಂಬಂಧ ಅಪೆಕ್ಸ್‌ ಬ್ಯಾಂಕ್‌ ಆಡಳಿತ ಮಂಡಳಿ ಸಭೆ ಸೇರಿ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ, ಕೋವಿಡ್‌ ಸಂಕಷ್ಟ ಕಾಲದಲ್ಲಿ ರೈತರ ಸಹಾಯಕ್ಕೆ ಬರಲು ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವು ಸದಾ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಇನ್ನು ಮುಂದೂ ಸಾಲ ಸೌಲಭ್ಯಗಳು ಸುಲಭವಾಗಿ ಸಿಗುವಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.


ಕಳೆದ ವರ್ಷ 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ ರೂ. 15,300 ಕೋಟಿ ಅಲ್ಪಾವಧಿ, ಮಧ್ಯಮಾವಧಿ ಬೆಳೆ ಸಾಲ ನೀಡುವ ಗುರಿಯನ್ನು ಹೊಂದಲಾಗಿತ್ತು. ಈ ನಿಟ್ಟಿನಲ್ಲಿ ಗುರಿ ಮೀರಿ ಸಾಧನೆ ಮಾಡಿದ್ದು, 25.67 ಲಕ್ಷ ರೈತರಿಗೆ ರೂ. 17,108 ಕೋಟಿ ಸಾಲ ನೀಡುವ ಮೂಲಕ ಶೇ. 114 ಗುರಿ ಸಾಧನೆಯನ್ನು ಮಾಡಲಾಗಿತ್ತು. ಈಗ 25.67 ಲಕ್ಷ ರೈತರಲ್ಲಿ ಕೋವಿಡ್‌ನಿಂದ ಮೃತಪಟ್ಟಿರುವ 10,187 ರೈತರ ರೂ. 79.47 ಕೋಟಿ ಸಾಲ ಮನ್ನಾ ಮಾಡುವ ಸಂಬಂಧ ಮುಖ್ಯಮಂತ್ರಿಗಳು ಚಿಂತನೆಯನ್ನು ನಡೆಸಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!