Saturday, July 24, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಕಾಂಗ್ರೆಸ್‌ ನಿಂದ ಬಿಜೆಪಿಗೆ ಸೇರ್ಪಡೆ

ಕಾರ್ಕಳ : ಕಾಂಗ್ರೆಸ್‌ ನಿಂದ ಬಿಜೆಪಿಗೆ ಸೇರ್ಪಡೆ

ಕಾರ್ಕಳ : ಮುದ್ರಾಡಿ ಗ್ರಾಮ ಪಂಚಾಯತ್‍ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ 4 ಬಾರಿ ಆಯ್ಕೆಯಾಗಿದ್ದ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶೋಧ ಶೆಟ್ಟಿ ಅವರು ಜು. 14ರಂದು ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಶಾಸಕ ವಿ. ಸುನಿಲ್ ಕುಮಾರ್ ಪಕ್ಷದ ಧ್ವಜ ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಹೆಗ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!