Saturday, December 4, 2021
spot_img
Homeಸ್ಥಳೀಯ ಸುದ್ದಿಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಚಿವ ಶ್ರೀನಿವಾಸ ಪೂಜಾರಿ ಭೇಟಿ

ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಚಿವ ಶ್ರೀನಿವಾಸ ಪೂಜಾರಿ ಭೇಟಿ

ಕಾರ್ಕಳ : ಜೀರ್ಣೋದ್ಧಾರಗೊಳ್ಳುತ್ತಿರುವ ಕ್ಷತ್ರೀಯ ಮರಾಠ ಸಮಾಜದ ಆಡಳಿತಕ್ಕೆ ಒಳಪಟ್ಟ‌ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜು. 17ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ದೇವರ ದರ್ಶನ ಪಡೆದ ಬಳಿಕ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಆಡಳಿತ ಸಮಿತಿ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ‌ ಮೊಕ್ತೇಸರ ಗಿರೀಶ್ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ‌ಪ್ರಕಾಶ್ ಜಾದವ್, ಬ್ರಹ್ಮಕಲಶೋತ್ಸವ ‌ಸಮಿತಿ ಅಧ್ಯಕ್ಷ ಶುಭದ ರಾವ್, ಮೊಕ್ತೇಸರರಾದ ಶೇಖರ್ ರಾವ್, ರಾಮಚಂದ್ರ ರಾವ್, ಗಣೇಶ್ ರಾವ್, ಸುದೀಂದ್ರ ರಾವ್‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!