Thursday, December 2, 2021
spot_img
Homeಸ್ಥಳೀಯ ಸುದ್ದಿಮುಂಗಾರು ಎಫೆಕ್ಟ್: ಜುಲೈ 26ರವರೆಗೂ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಮುಂಗಾರು ಎಫೆಕ್ಟ್: ಜುಲೈ 26ರವರೆಗೂ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಜುಲೈ.26ರವರೆಗೂ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ. 

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23-24ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!