Wednesday, January 19, 2022
spot_img
Homeಸ್ಥಳೀಯ ಸುದ್ದಿಡೆಂಗ್ಯೂ ವಿರೋಧಿ ಮಾಸಾಚರಣೆ : ಡೆಂಗ್ಯೂ-ಚಿಕೂನ್‌ಗುನ್ಯಾ ತಡೆಗಟ್ಟುವಲ್ಲಿ ಮುಂಜಾಗ್ರತೆ ಅಗತ್ಯ- ಡಾ. ಕೃಷ್ಣಾನಂದ ಶೆಟ್ಟಿ

ಡೆಂಗ್ಯೂ ವಿರೋಧಿ ಮಾಸಾಚರಣೆ : ಡೆಂಗ್ಯೂ-ಚಿಕೂನ್‌ಗುನ್ಯಾ ತಡೆಗಟ್ಟುವಲ್ಲಿ ಮುಂಜಾಗ್ರತೆ ಅಗತ್ಯ- ಡಾ. ಕೃಷ್ಣಾನಂದ ಶೆಟ್ಟಿ

ಕಾರ್ಕಳ : ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪ್ರಾ. ಆರೋಗ್ಯ ಕೇಂದ್ರ ಈದು ಹಾಗೂ ಗ್ರಾಮ ಪಂಚಾಯತ್‌ ಈದು ಸಂಯುಕ್ತ ಆಶ್ರಯದಲ್ಲಿ ಈದು ಗ್ರಾಮ ಪಂಚಾಯತ್‌ನಲ್ಲಿ ಜು. 23ರಂದು ತಾಲೂಕು ಮಟ್ಟದ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಈದು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಭಾಗವಹಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾತನಾಡಿ, ಡೆಂಗ್ಯೂ ಜ್ವರ, ಚಿಕುಂಗುನ್ಯ ರೋಗ ಬಂದ ಅನಂತರ ಅನುಭವಿಸುವ ಕಷ್ಟಕ್ಕಿಂತ ರೋಗ ಬರದಂತೆ ನಾವೆಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅಗತ್ಯ. ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಇಲಾಖೆಯು ಹಮ್ಮಿಕೊಳ್ಳುವ ಮಾಹಿತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪಂಚಾಯತ್‌ ಉಪಾಧ್ಯಕ್ಷ ವಿಜಯ ಕುಮಾರ್‌, ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸುಮಂಗಲ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಷಣ್ಮುಖ, ಗ್ರಾ.ಪಂ. ಮಾಜಿ ಅಧ್ಯಕ್ಷ ಪುರುಷೋತ್ತಮ ಗೌಡ ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಆರೋಗ್ಯ ಸಹಾಯಕಿ ಸುರೇಖ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!