Saturday, October 16, 2021
spot_img
Homeಸ್ಥಳೀಯ ಸುದ್ದಿಮೊಬೈಲ್‌ ಸೇವಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಶಾಸಕರ ಸಭೆ

ಮೊಬೈಲ್‌ ಸೇವಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಶಾಸಕರ ಸಭೆ

ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸುವಂತೆ ಸುನಿಲ್‌ ಕುಮಾರ್‌ ಸೂಚನೆ

ಕಾರ್ಕಳ : ಕಾರ್ಕಳದ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಆನ್‌ಲೈನ್‌ ತರಗತಿಗೆ ಅಡಚಣೆಯಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಮತ್ತು ಸಾರ್ವಜನಿಕರ ಸಂಪರ್ಕಕ್ಕೆ ತೊಂದರೆಯಾಗುತ್ತಿದ್ದು, ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಸರಿಪಡಿಸುವಂತೆ ಶಾಸಕ ವಿ. ಸುನಿಲ್ ಕುಮಾರ್ ಮೊಬೈಲ್‌ ಸೇವಾ ಸಂಸ್ಥೆಯವರಿಗೆ ಸೂಚಿಸಿದರು.
ಜು. 23ರಂದು ಶಾಸಕರ ಕಚೇರಿಯಲ್ಲಿ ಮೊಬೈಲ್ ಸೇವಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಮೊಬೈಲ್ ಟವರ್ ಇಲ್ಲದ ಪ್ರದೇಶಗಳಲ್ಲಿ ಹೊಸ ಮೊಬೈಲ್ ಟವರ್ ಸ್ಥಾಪಿಸುವ ಮತ್ತು ನೆಟ್‍ವರ್ಕ್ ಸಿಗ್ನಲ್ ಕಡಿಮೆ ಇರುವ ಪ್ರದೇಶಗಳಲ್ಲಿ ನೆಟ್‍ವರ್ಕ್ ಉತ್ತಮ ಪಡಿಸುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಮೊಬೈಲ್ ಸೇವಾ ಕಂಪೆನಿ ಪ್ರತಿನಿಧಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!