Wednesday, January 19, 2022
spot_img
Homeಸ್ಥಳೀಯ ಸುದ್ದಿಮುಖ್ಯ ಮಂತ್ರಿ ಯಡಿಯೂರಪ್ಪ ರಾಜೀನಾಮೆ ಘೋಷಣೆ :ಭಾವುಕರಾದ ಸಿಎಂ

ಮುಖ್ಯ ಮಂತ್ರಿ ಯಡಿಯೂರಪ್ಪ ರಾಜೀನಾಮೆ ಘೋಷಣೆ :ಭಾವುಕರಾದ ಸಿಎಂ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.‌ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜು. 26ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಯಡಿಯೂರಪ್ಪ ಅವರು ಬಿಜೆಪಿ ಸಾಧನೆ ಕುರಿತು ಮಾತನಾಡಿದರು. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯನಿರ್ವಹಿಸಿ, ಚುನಾವಣೆ ಎದುರಿಸಿ ಗೆದ್ದು, ಅನಂತರದ ದಿನಗಳಲ್ಲಿ ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದವರು ಹೇಳಿದರು. ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಈ ವೇಳೆ ಭಾವುಕರಾದ ಯಡಿಯೂರಪ್ಪ, ತಾವು ಯಾರೂ ಅನ್ಯತಾ ಭಾವಿಸಬಾರದು, ನಾನು ನಿಮ್ಮೆಲ್ಲರ ಅಪ್ಪಣೆ ಪಡೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೇನೆ. ಮಧ್ಯಾಹ್ನ ರಾಜಭಾವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತೇನೆಂದು ಹೇಳಿದರು. 75 ವರ್ಷ ದಾಟಿದ ಬಳಿವೂ ನನಗೆ ಎರಡು ವರ್ಷ ಸಿಎಂ ಆಗಿ ಮುಂದುವರೆಯಲು ಅವಕಾಶ ನೀಡಿದ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಶಬ್ದಗಳಲ್ಲಿ ಧನ್ಯವಾದ ಹೇಳಲು ಆಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವ ಇಲ್ಲದ ಸಮಯದಲ್ಲಿ ನಾನು ಏಕಾಂಗಿ ಹೋರಾಟ ಮಾಡಿ ಪಕ್ಷ ಸಂಘಟನೆ ಮಾಡಿದೆ.

ನಾನು ಮತ್ತು ಬೆಳ್ತಂಗಡಿಯ ವಸಂತ ಬಂಗೇರ ಅವರು ವಿಧಾನಸಭೆಗೆ ಆಯ್ಕೆಯಾದಾಗ, ವಸಂತ ಬಂಗೇರ ಅವರು ಹಠಾತ್ ಪಕ್ಷಕ್ಕೆ ಕೈಕೊಟ್ಟು ಹೊರ ಹೋದರು. ಆ ವೇಳೆ ನಾನು ಎದೆಗುಂದಲಿಲ್ಲ. ಹಿಂದಿರುಗಿ ನೋಡದೆ, ಒಬ್ಬನೇ ಎಂಬುವುದರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಏಕಾಂಗಿ ಹೋರಾಟ ಮಾಡಿದೆ. ಆ ಮೂಲಕ ಇಂದು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಫಲನಾದೆ. ನನ್ನ ಪಕ್ಷದ ಸೇವೆ ಗಮನಿಸಿದ ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರದಲ್ಲಿ ಸಚಿವನಾಗು ಅಂದಿದ್ದರು. ಆದರೆ, ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು ಎಂದು ಅದನ್ನು ನಿರಾಕರಿಸಿದೆ ಎಂದು ಹೇಳಿ ಭಾವುಕರಾದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!