Tuesday, December 7, 2021
spot_img
Homeರಾಜ್ಯಹಿರಿಯ ನಟಿ ಜಯಂತಿ ನಿಧನ

ಹಿರಿಯ ನಟಿ ಜಯಂತಿ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ವರ್ಷಗಳಿಂದ ಅಸ್ತಮಾ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿದ್ದು, ಬಳಿಕ ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು.

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ 190 ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು.

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದರು. ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು.

ಸಿಎಂ ಸಂತಾಪ
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!