Friday, September 24, 2021
spot_img
Homeಸ್ಥಳೀಯ ಸುದ್ದಿಸಚಿವೆ ಶಶಿಕಲಾ ಜೊಲ್ಲೆ ಅವರನ್ನು ತನಿಖೆಗೊಳಪಡಿಸಬೇಕು-ಬಿಪಿನ್‌ ಚಂದ್ರ ಪಾಲ್‌

ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ತನಿಖೆಗೊಳಪಡಿಸಬೇಕು-ಬಿಪಿನ್‌ ಚಂದ್ರ ಪಾಲ್‌

ಗ್ರಾಮೀಣ ಪರಿಸರದ ಬಡ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ವೃದ್ಧಿಸುವ ಗುರಿಯೊಂದಿಗೆ ಅಂಗನವಾಡಿ ಕೇಂದ್ರಗಳಿಗೆ ಮಾತೃಪೂರ್ಣ ಯೋಜನೆಯಡಿಯಲ್ಲಿ ರಾಜ್ಯ ಸರಕಾರ ಕೊಡಮಾಡುತ್ತಿದ್ದ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ. ಹೀಗಾಗಿ ಶಶಿಕಲಾ ಜೊಲ್ಲೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಖೆಗೆ ಅವಕಾಶ ಮಾಡಿಕೊಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವಧಿಯಲ್ಲಿ ಜಾರಿಗೆ ಬಂದಿದ್ದ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಅಂದು ವಿರೋಧ ಪಕ್ಷವಾಗಿದ್ದ ಬಿಜೆಪಿ ಧರ್ಮದ ನೆಲೆಗಟ್ಟಿನಲ್ಲಿ ಇದನ್ನು ವಿರೋಧಿಸುತ್ತ ಬಂದಿತ್ತು. ಇಂದು ಅದೇ ಪಕ್ಷದ ಸಚಿವೆಯೊಬ್ಬರು ಅದೇ ಮೊಟ್ಟೆಯಲ್ಲಿ ಹಣ ದೋಚಲು ನೋಡಿ, ಭ್ರಷ್ಟಾಚಾರಕ್ಕೆ ಕೈ ಚಾಚಿ, ಯೋಜನೆಯನ್ನು ಕುಲಗೆಡಿಸುತ್ತಿರುವುದು ಸರಕಾರದ ಜನಪರ ಚಿಂತನೆಯ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!