ಕಾರ್ಕಳ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ಇದರ ವತಿಯಿಂದ ಜು. 27ರಂದು ಆನೆಕೆರೆ ಅಮರ್ ಜವಾನ್ ಸ್ಮಾರಕದ ಬಳಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ನಿವೃತ್ತ ಸೇನಾನಿ ಗಿಲ್ಬರ್ಟ್ ಬ್ರಿಗಾಂಝ ಹಾಗೂ ನಿವೃತ್ತ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಪರಿಷತ್ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್, ವಿದ್ಯಾರ್ಥಿ ಸಂಘದ ಹಿರಿಯರು ಹಾಗೂ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಕಳ : ಆರ್‌ಎಸ್‌ಎಸ್-ಎಬಿವಿಪಿ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ









































