Thursday, December 2, 2021
spot_img
HomeUncategorizedಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸುವುದಕ್ಕೂ ಮುನ್ನ ತಮ್ಮ ರಾಜಕೀಯ ಗುರು ಬಿ ಎಸ್ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ವೇದಿಕೆಯೇರಿದ ಬಸವರಾಜ್ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡರು.

ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕೊಠಡಿಯ ನಾಮಫಲಕ ಬದಲಾಗಿದೆ. ನಿನ್ನೆಯವರೆಗೆ ಬಿ ಎಸ್ ಯಡಿಯೂರಪ್ಪನವರ ಹೆಸರು ಇದ್ದರೆ ಇಂದು ಬಸವರಾಜ ಬೊಮ್ಮಾಯಿ ಸಿಎಂ ಎಂದು ನಾಮಫಲಕ ಅಲಂಕೃಗೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!