Thursday, December 2, 2021
spot_img
Homeಸ್ಥಳೀಯ ಸುದ್ದಿಪುರಸಭಾ ವ್ಯಾಪ್ತಿಯಲ್ಲಿ ಅಸಮರ್ಪಕ ಒಳಚರಂಡಿ ಕಾಮಗಾರಿ: ನಗರ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಪುರಸಭಾ ವ್ಯಾಪ್ತಿಯಲ್ಲಿ ಅಸಮರ್ಪಕ ಒಳಚರಂಡಿ ಕಾಮಗಾರಿ: ನಗರ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಕಾರ್ಕಳ : ಒಳಚರಂಡಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ಸಂಶಯವಿದ್ದು ಕೂಡಲೇ ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಪುರಸಭ ಸದಸ್ಯ ಶುಭದ ರಾವ್‌ ಆಗ್ರಹಿಸಿದರು. ಅಸಮರ್ಪಕವಾಗಿ ಒಳಚರಂಡಿ ಕಾಮಗಾರಿ ನಡೆದಿದೆ ಎಂಬ ಕುರಿತು ಕಾರ್ಕಳ ನಗರ ಕಾಂಗ್ರೆಸ್‌ ಬಸ್‌ ನಿಲ್ದಾಣ ಬಳಿ ಜು. 28ರಂದು ನಡೆಸಿದ ಪ್ರತಿಭಟನೆ ಉದ್ಧೇಶಿಸಿ ಅವರು ಮಾತನಾಡಿದರು.
ಒಳಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ. ಅಂದು ಉಸ್ತುವಾರಿ ಸಚಿವರಾಗಿದ್ದ ಬೊಮ್ಮಾಯಿ ಇದೀಗ ಮುಖ್ಯಮಂತ್ರಿಯಾಗಿದ್ದು, ಸೂಕ್ತ ತನಿಖೆಗೆ ಆದೇಶಿಸಬೇಕೆಂದು ಶುಭದ ರಾವ್‌
ಆಗ್ರಹಿಸಿದರು.

ರಸ್ತೆಯಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು
ಜಿಲ್ಲಾ ಕಾಂಗ್ರೆಸ್‌ ವಕ್ತಾರ ಬಿಪಿನ್ ಚಂದ್ರ ಪಾಲ್ ಮಧುರಾಜ್ ಶೆಟ್ಟಿ ಮಾತನಾಡಿ, ಅಸಮರ್ಪಕ ಒಳಚರಂಡಿ ಕಾಮಗಾರಿಯಿಂದಾಗಿ ಈ ಬಾರಿ ಮಳೆಗಾಲದಲ್ಲಿ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುವಂತಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಒಳಚರಂಡಿ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸಬೇಕು. ಒಳ ಚರಂಡಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಇದರ ಬಗ್ಗೆಯೂ ತನಿಖೆಯಾಗಬೇಕೆಂದರು.
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸದಾಶಿವ ದೇವಾಡಿಗ, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಪುರಸಭಾ ಸದಸ್ಯರಾದ ವಿನ್ನಿ ಬೋಲ್ಡ್‌ ಮೆಂಡೊನ್ಸಾ, ಪ್ರತಿಮಾ ರಾಣೆ, ರೆಹಮತ್‌ ಶೇಖ್‌, ಪ್ರಭಾ, ಅಶ್ಫಕ್ ಅಹಮ್ಮದ್, ಇನ್ನಾ ಗ್ರಾ.ಪಂ. ಅಧ್ಯಕ್ಷ ಕುಶಾ ಮೂಲ್ಯ, ಮಾಜಿ ಸದಸ್ಯರಾದ ವಿವೇಕ್‌ ಶೆಣೈ, ಶಿವಾಜಿ ರಾವ್‌, ರಾಜೇಶ್‌ ದೇವಾಡಿಗ, ಸುನಿಲ್‌ ಕೋಟ್ಯಾನ್‌, ಯುವ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!