Tuesday, December 7, 2021
spot_img
Homeಸ್ಥಳೀಯ ಸುದ್ದಿಕ್ಷತ್ರಿಯ ಮರಾಠ ಸಮಾಜದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕ್ಷತ್ರಿಯ ಮರಾಠ ಸಮಾಜದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ : ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ 7 ಮಂದಿ ವಿದ್ಯಾರ್ಥಿಗಳನ್ನು ಆ. 1ರಂದು ದೇಗುಲದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಸಂಜನಾ, ಮನ್ವಿತಾ, ಶ್ರದ್ದಾ, ಶ್ರೀ ಲಕ್ಷ್ಮಿ, ಸಹನಾ, ನಯನ್ ಕುಮಾರ್, ವಿದಿಶಾ ವೈ ರಾವ್‌ ಅವರನ್ನು ಸನ್ಮಾನಿಸಲಾಯಿತು. ಶುಭದ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ರೋಟರಿ ರಾಕ್‌ ಸಿಟಿ ಅಧ್ಯಕ್ಷ ಪ್ರಕಾಶ್ ಪೈ, ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಬೇಬಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಮೊಕ್ತೇಸರರು, ರೋಟರಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ರಾವ್ ಜಾದವ್ ಸ್ವಾಗತಿಸಿ, ಪ್ರಕಾಶ್ ರಾವ್ ಸಾಣೂರು ಕಾರ್ಯಕ್ರಮ ನಿರೂಪಿಸಿದರು. ಸುರೇಂದ್ರ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!