Friday, September 24, 2021
spot_img
Homeದೇಶಕರ್ನಾಟಕದ ಒಂದು ವಿವಿ ಸೇರಿದಂತೆ ದೇಶದ 24 ವಿಶ್ವವಿದ್ಯಾಲಯಗಳು ನಕಲಿ: ಯುಜಿಸಿ

ಕರ್ನಾಟಕದ ಒಂದು ವಿವಿ ಸೇರಿದಂತೆ ದೇಶದ 24 ವಿಶ್ವವಿದ್ಯಾಲಯಗಳು ನಕಲಿ: ಯುಜಿಸಿ

ನವದೆಹಲಿ: ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಯುಜಿಸಿ 24 ಸ್ವಯಂ ಘೋಷಿತ ಶಿಕ್ಷಣ ಸಂಸ್ಥೆಗಳನ್ನು ನಕಲಿ ಎಂದು ಘೋಷಿಸಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಇನ್ನೂ ಎರಡು ಸಂಸ್ಥೆಗಳನ್ನು ಪತ್ತೆ ಮಾಡಿದೆ. ವಿದ್ಯಾರ್ಥಿಗಳು,  ಪೋಷಕರು, ಸಾಮಾನ್ಯ ಜನರು ಮತ್ತು ವಿದ್ಯುನ್ಮಾನ ಮುದ್ರಣ ಮಾಧ್ಯಮದ ಮೂಲಕ ಪಡೆದ ದೂರುಗಳ ಆಧಾರದ ಮೇಲೆ, ಯುಜಿಸಿ 24 ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಿದೆ ಎಂದು ಹೇಳಿದರು.

ಈ 24 ನಕಲಿ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ ಕೂಡ ಒಂದಾಗಿದ್ದು, ಉತ್ತರ ಪ್ರದೇಶವು ಇಂತಹ ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪುದುಚೇರಿ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯವಿದ್ದು, ಅವುಗಳೆಂದರೆ – ಪುದುಚೇರಿಯ ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್; ಕ್ರೈಸ್ಟ್ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ, ಆಂಧ್ರಪ್ರದೇಶ; ರಾಜಾ ಅರೇಬಿಕ್ ವಿಶ್ವವಿದ್ಯಾಲಯ,  ನಾಗ್ಪುರ; ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ, ಕೇರಳ ಮತ್ತು ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ, ಕರ್ನಾಟಕ ಎಂದು ಗುರುತಿಸಲಾಗಿದೆ.

ಭಾರತೀಯ ಶಿಕ್ಷಾ ಪರಿಷತ್, ಲಕ್ನೋ ಮತ್ತು ನವದೆಹಲಿಯ ಐಐಪಿಎಂ ವಿಷಯಗಳು ನ್ಯಾಯಾಲಯದಲ್ಲಿ ಅಧೀನವಾಗಿವೆ ಎಂದು ಪ್ರಧಾನಿ ಲೋಕಸಭೆಗೆ ಮಾಹಿತಿ ನೀಡಿದರು.  

ಇದೇ ವೇಳೆ ನಕಲಿ ಅಥವಾ ಮಾನ್ಯತೆ ಪಡೆಯದ ವಿಶ್ವವಿದ್ಯಾಲಯಗಳ ವಿರುದ್ಧ ಯುಜಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಪ್ರಧಾನ್, ‘ರಾಷ್ಟ್ರೀಯ ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳು/ಸಂಸ್ಥೆಗಳ ಪಟ್ಟಿಯ ಬಗ್ಗೆ ಯುಜಿಸಿ ಸಾರ್ವಜನಿಕ ನೋಟಿಸ್ ನೀಡುತ್ತದೆ. ಆಯೋಗವು  ತಮ್ಮ ಅಧಿಕಾರ ವ್ಯಾಪ್ತಿಯಲ್ಲಿಇರುವ ಅಂತಹ ವಿಶ್ವವಿದ್ಯಾಲಯಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯುತ್ತದೆ’ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!