Homeಸ್ಥಳೀಯ ಸುದ್ದಿಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ ಸಚಿವರು-ಕೋವಿಡ್-ನೆರೆ ಪರಿಹಾರ ಪರಿಶೀಲನೆ ಉಡುಪಿ ಉಸ್ತುವಾರಿಯಾಗಿ ಸುನಿಲ್‌ ಕುಮಾರ್‌

Related Posts

ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ ಸಚಿವರು-ಕೋವಿಡ್-ನೆರೆ ಪರಿಹಾರ ಪರಿಶೀಲನೆ ಉಡುಪಿ ಉಸ್ತುವಾರಿಯಾಗಿ ಸುನಿಲ್‌ ಕುಮಾರ್‌


ಕಾರ್ಕಳ : ಕೋವಿಡ್‌-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು ಉಡುಪಿ ಜಿಲ್ಲೆಗೆ ಉಸ್ತುವಾರಿಯಾಗಿ ಸಚಿವ ವಿ. ಸುನಿಲ್‌ ಕುಮಾರ್‌ ಅವರಿಗೆ ಹೊಣೆ ನೀಡಿ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಸರಕಾರದ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿರುತ್ತಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರ್ಕಳ ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ತನ್ನ ಕ್ಷೇತ್ರದ ಜನತೆಗೆ, ಚುನಾವಣೆಯಲ್ಲಿ ತನ್ನ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. ನನ್ನ ಮೇಲೆ ಭರವಸೆಯಿಟ್ಟು ಸಚಿವ ಸ್ಥಾನ ನೀಡಿದ ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಚಿವನಾಗಿ ಶಕ್ತಿ ಮೀರಿ ಕೆಲಸ ಮಾಡುವ ಮೂಲಕ ತನಗೆ ಒಪ್ಪಿಸಿದ ಖಾತೆಗೆ ನ್ಯಾಯ ಒದಗಿಸುತ್ತೇನೆ ಎಂದು ಸುನಿಲ್‌ ಕುಮಾರ್‌ ತಿಳಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬಳಿಕ ನ್ಯೂಸ್ ಕಾರ್ಕಳಕ್ಕೆ ತಿಳಿಸಿದರು.

LEAVE A REPLY

Please enter your comment!
Please enter your name here

Latest Posts

error: Content is protected !!