Thursday, December 2, 2021
spot_img
Homeಸ್ಥಳೀಯ ಸುದ್ದಿಕುಕ್ಕುಂದೂರು : ವಿವಿಧೆಡೆ ಮಗ್ಗಿ ಪುಸ್ತಕ ವಿತರಣೆ

ಕುಕ್ಕುಂದೂರು : ವಿವಿಧೆಡೆ ಮಗ್ಗಿ ಪುಸ್ತಕ ವಿತರಣೆ

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 5 ವಾರ್ಡ್‌ಗಳಲ್ಲಿ ಆ. 9ರಂದು ಮನೆಯೇ ಮೊದಲ ಪಾಠ ಶಾಲೆ ಮಗ್ಗಿ ಪುಸ್ತಕ ವಿತರಣೆ ಮಾಡಲಾಯಿತು. ಜಯಂತಿ ನಗರ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ, ಕುಕ್ಕುಂದೂರಿನ ಸ್ತ್ರೀಶಕ್ತಿ ಭವನ, ಪರಪು, ದುರ್ಗಾನಗರ ಅಂಗನವಾಡಿ ಕೇಂದ್ರ, ಅಯ್ಯಪ್ಪನಗರ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದುರ್ಗ ಜೋಡುರಸ್ತೆಯಲ್ಲಿ ಸರಣಿ ಕಾರ್ಯಕ್ರಮ ಜರುಗಿದ್ದು, 250ಕ್ಕೂ ಹೆಚ್ಚು ಪುಸ್ತಕಗಳನ್ನು ವಿತರಿಸಲಾಯಿತು. ಕುಕ್ಕುಂದೂರು ಪಂಚಾಯತ್‌ ಅಧ್ಯಕ್ಷೆ ಶಶಿಮಣಿ ಸಂಪತ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿ ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ತಾ.ಪಂ. ಮಾಜಿ ಉಪಾಧ್ಯಕ್ಷ ರವೀಂದ್ರ ಕುಮಾರ್‌, ಜಿ.ಪಂ. ಮಾಜಿ ಸದಸ್ಯ ಸುಮಿತ್‌ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಅಶೋಕ್‌ ಶೆಟ್ಟಿ, ಕುಕ್ಕುಂದೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಅನಿಲ್‌ ಪೂಜಾರಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಜ್ಯೋತಿ ರಮೇಶ್‌, ಮಾಜಿ ಉಪಾಧ್ಯಕ್ಷ ರಾಜೇಶ್‌ ರಾವ್‌, ಮಾಜಿ ಸದಸ್ಯ ಪ್ರಸಾದ್‌ ಐಸಿರ, ಶಾಲಾ ಮುಖ್ಯಶಿಕ್ಷಕರು, ಪಂಚಾಯತ್‌ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!