Tuesday, December 7, 2021
spot_img
Homeರಾಜ್ಯಆ. 23ರಿಂದ ಪದವಿ‌ ಕಾಲೇಜು ಪ್ರವೇಶ ಪ್ರಕ್ರಿಯೆ ಆರಂಭ

ಆ. 23ರಿಂದ ಪದವಿ‌ ಕಾಲೇಜು ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಆ. 23 ರಿಂದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ ಸೋಮವಾರ ತಿಳಿಸಿದ್ದಾರೆ.
ವಿವಿಧ ಕುಲಪತಿಗಳ ಜತೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನೂತನ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯವಾರು ಮಾದರಿ ಪಠ್ಯಕ್ರಮ ಸಿದ್ದಪಡಿಸಲು ವಿಷಯ ತಜ್ಞರ 32 ಸಮಿತಿ ರಚಿಸಲಾಗಿದೆ. ಸಮಿತಿಗಳ ವರದಿ ಆಧರಿಸಿ ಆ. 31 ರೊಳಗೆ ಪಠ್ಯ ಸಿದ್ದಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!