Saturday, October 16, 2021
spot_img
Homeರಾಜ್ಯಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಘಟಕ, ಗಡಿ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆ: ಸಿಎಂ...

ಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಘಟಕ, ಗಡಿ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆ: ಸಿಎಂ ಬೊಮ್ಮಾಯಿ

ಮಂಗಳೂರು: ಸಂಭವನೀಯ ಮೂರನೇ ಕೊರೋನಾ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಎಸ್ ಡಿಆರ್ ಎಫ್ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ 32 ಬೆಡ್ ಗಳ ಮೆಡಿಸಿನ್ ವಿಭಾಗ ಮತ್ತು ಐಸಿಯು ಘಟಕ ಉದ್ಘಾಟಿಸಿ ಮಾತನಾಡಿದ ಸಿಎಂ, ಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಘಟಕ ತೆರೆದು ಅರೋಗ್ಯ ತಪಾಸಣೆಗೆ ಆದ್ಯತೆ ನೀಡುವುದಾಗಿ ಹೇಳಿದರು. 

ಮಂಗಳೂರಿನ  ವೆನ್ಲಾಕ್ ಆಸ್ಪತ್ರೆಯಲ್ಲಿ ಅರೋಗ್ಯ ಇಲಾಖೆ, ಜಿಲ್ಲಾಡಳಿತ ಸೇರಿ ವೆಂಟಿಲೇಟರ್, ಮೊನಿಟರ್ ಸೇರಿದಂತೆ ಉತ್ತಮವಾದ ಐಸಿಯು ಘಟಕವನ್ನು ನಿರ್ಮಾಣ ಮಾಡಲಾಗಿದ್ದು, ಇದೆ ರೀತಿಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಆಧುನಿಕ ಘಟಕಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ಯಾವುದೇ ಪರಿಸ್ಥಿತಿ ಬಂದರು ಅದನ್ನು ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧರಾಗಬೇಕು ಎಂದು ಹೇಳಿದರು.

ಇನ್ನು ಕೊರೋನಾ ನಿಯಂತ್ರಿಸಲು ಗಡಿಭಾಗದ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿಂದು ಜಿಲ್ಲಾ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದರು. 

ಕೇಂದ್ರದಿಂದ ಲಭ್ಯವಾಗುವ ಲಸಿಕೆಯನ್ನು ಗಡಿ ಭಾಗದ ಜಿಲ್ಲೆಗಳಿಗೆ ಪೂರೈಕೆ ಮಾಡಲು ಆದ್ಯತೆ  ನೀಡಲಾಗುವುದು. ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಪರೀಕ್ಷೆ , ತಪಾಸಣೆ ಹೆಚ್ಚಿಸಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!