Saturday, October 16, 2021
spot_img
Homeರಾಜ್ಯಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.

ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ರಾಜಕೀಯ ನಾಯಕರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ವ್ಯವಸ್ಥೆಯಿರುತ್ತದೆ, ಆದರೆ ತಮಗೆ ಬೆಂಗಳೂರು ನಗರದಲ್ಲಿ ಆ ಸೌಲಭ್ಯ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಾವು ಸಂಚರಿಸುವಾಗ ಸಿಗ್ನಲ್ ಫ್ರೀ ಮಾಡಿಕೊಡಲು ಸೂಚಿಸಿರುವ ಸಿಎಂ, ತಮ್ಮ ಸಂಚಾರ ವೇಳೆ ಆಂಬ್ಯುಲೆನ್ಸ್ ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಸಂಚಾರಿ ಕಂಟ್ರೋಲ್​ನಿಂದ ಅಧಿಕೃತ ಆದೇಶ ಹೊರಬಿದ್ದಿದೆ. 
ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!