HomeUncategorizedಕಾರ್ಕಳ : ಶಿವಂ ಎಲೆಕ್ಟ್ರಾನಿಕ್ಸ್‌ ಮಳಿಗೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌

Related Posts

ಕಾರ್ಕಳ : ಶಿವಂ ಎಲೆಕ್ಟ್ರಾನಿಕ್ಸ್‌ ಮಳಿಗೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌

ಭಸ್ಮಗೊಂಡ ಎಲೆಕ್ಟ್ರಾನಿಕ್ಸ್‌ ಉಪಕರಣ : ಅಪಾರ ನಷ್ಟ

ಕಾರ್ಕಳ : ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಮಹಾಲಕ್ಷ್ಮಿ ಪ್ರಭ ಕಾಂಪ್ಲೆಕ್ಸ್ ನಲ್ಲಿನ ಶಿವಂ ಎಲೆಕ್ಟ್ರಾನಿಕ್ಸ್‌ನಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದ್ದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು ಸಂಪೂರ್ಣ ಭಸ್ಮವಾಗಿದೆ. ನಿಟ್ಟೆ ಗ್ರಾಮದ ದೂಪದಕಟ್ಟೆ ಸಮೀಪದ ಜೇಬೆಟ್ಟು ಗುರುಪ್ರಸಾದ್ ಶೆಟ್ಟಿ ಮಾಲಿಕತ್ವದ ಶಿವಂ ಎಲೆಕ್ಟ್ರಾನಿಕ್ಸ್‌ನಲ್ಲಿ ಭಾನುವಾರ ಮುಂಜಾನೆ 3:45ರ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದು ಅಗ್ನಿ ಶಾಮಕ ದಳ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದರೂ ಈ ವೇಳೆಗಾಗಲೇ ಎಲೆಕ್ಟ್ರಾನಿಕ್ಸ್‌ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!