Tuesday, December 7, 2021
spot_img
Homeಸ್ಥಳೀಯ ಸುದ್ದಿಕರ್ನಾಟಕದಲ್ಲಿ ಶಾಲಾರಂಭಕ್ಕೆ ಇಂದು ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ಶಾಲಾರಂಭಕ್ಕೆ ಇಂದು ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಸಂಜೆ 9 ರಿಂದ 12 ನೇ ತರಗತಿವರೆಗೆ ಪ್ರಾರಂಭ ಮಾಡುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಎಂದು ಹೇಳಿದರು. ಇದಕ್ಕಾಗಿ, ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳುತ್ತಿದ್ದೇವೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಮಕ್ಕಳಿಗೆ ಪೂರಕವಾದ ಮಾರ್ಗಸೂಚಿ ಪ್ರಕಟವಾಗಲಿದೆ. ಮಕ್ಕಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ಳುತ್ತಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ ಎಂದು ಸಚಿವರು ಹೇಳಿದರು.

ಖಾಸಗಿ ಶಾಲೆಗಳಿಂದ ಶುಲ್ಕ ವಸೂಲಿ‌ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ನಾವು ಯಾವುದನ್ನೂ ಬಲವಂತವಾಗಿ ಹೇರಲಾಗಲ್ಲ. ರೂಪ್ಸಾ ಜೊತೆ ನಾನು ಮಾತನಾಡಿದ್ದೇನೆ. ಕೋವಿಡ್ ನಿಂದ ಪೋಷಕರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಹೆಚ್ಚು ಬಲವಂತ ಮಾಡಬೇಡಿ ಎಂದಿದ್ದೇವೆ. ಖಾಸಗಿ ಶಾಲೆಗಳ ಸಂಘಟನೆ ಒಪ್ಪಿದೆ. ಪೂರ್ಣ ಶುಲ್ಕ ಕಟ್ಟಿ ಎನ್ನುವುದು ಸರಿಯಲ್ಲ. ಪೋಷಕರನ್ನ ಕಸ್ಟಮರ್ ರೀತಿ ನೋಡಿಬೇಡಿ ಎಂದಿದ್ದೇನೆ. ಶಾಲೆಗಳನ್ನೂ ಇತಿಮಿತಿಗೆ ತೆಗೆದುಕೊಳ್ಳಬೇಕು. ಪೋಷಕರ ಹಿತವನ್ನೂ‌ ಗಮನಿಸಬೇಕು. ಎಲ್ಲವನ್ನೂ‌ನೋಡಿಯೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕೆಲವೊಂದು ವಿಚಾರ ಕೋರ್ಟ್ ನಲ್ಲಿವೆ, ಹಾಗಾಗಿ ನೇರವಾಗಿ ಹಿಡಿತ ಸಾದಿಸುವುದು ಕಷ್ಟ ಎಂದು ಹೇಳಿದರು.

ತಹಸೀಲ್ದಾರ್, ಬಿಇಒ‌ ಜೊತೆ ಕೇಳಿಕೊಂಡಿದ್ದೇವೆ. ಶಿಕ್ಷಕರ ಜೊತೆ ಕೈಜೋಡಿಸುವಂತೆ ಸೂಚಿಸಿದ್ದೇವೆ. ಶಾಲೆಗಳ ಕೊಠಡಿ ಸ್ಯಾನಿಟೈಸ್ ಮಾಡುವುದು. ಮಕ್ಕಳಿಗೆ ಮಾಸ್ಕ್ ಒದಗಿಸುವುದು. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯತ್ ಗಳು ನೋಡಿಕೊಳ್ಳುತ್ತವೆ. ಆನ್ ಲೈನ್, ಆಫ್ ಲೈನ್ ಯಾವುದು ಬೇಕಾದರು ಪಡೆಯಬಹುದು. ಅದು ಪೋಷಕರ ಇಚ್ಚೆಗೆ ಬಿಟ್ಟಿದ್ದೇವೆ. ಒಂದೇ ಒಂದು ಸೋಂಕು ಕಂಡು ಬಂದರೂ ತರಗತಿ ನಿಲ್ಲಿಸುತ್ತೇವೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಇನ್ನು ತಜ್ಙರ ಜೊತೆ 1 ರಿಂದ 8 ರವರೆಗೆ ತೆರೆಯುವ ಬಗ್ಗೆ ಚರ್ಚೆ ಯ ಮಾಡಿ ಸಭೆ ನಡೆಸುತ್ತಾರೆ. ಅಲ್ಲಿ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!