ಪೊಲೀಸ್ ಕಮೀಷನರ್ ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ

ಮಂಗಳೂರು: ಪೊಲೀಸ್ ಆಯುಕ್ತರಿಗೆ ಮೊದಲೇ ಮಾಹಿತಿ ನೀಡಿ ನಂತರ ದಂಪತಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನ ಚಿತ್ರಾಪುರದಲ್ಲಿ ನಡೆದಿದೆ.

ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಶರಣಾದ ದಂಪತಿಗಳಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದ್ದರು.

ಕರೆ ಬರುತ್ತಿದ್ದಂತೆ ಅವರ ಹರಸಾಹಸಪಟ್ಟು ಅವರ ಲೊಕೇಷನ್ ಪತ್ತೆ ಮಾಡಿ ಸ್ಥಳಕ್ಕೆ ಪೊಲೀಸರನ್ನು ಕಳುಹಿಸಲಾಗಿತ್ತು. ಆದರೆ ಆ ವೇಳೆಗೆ ದಂಪತಿ ನೇಣಿಗೆ ಶರಣಾಗಿದ್ದಾರೆ.

ಸ್ಥಳದಲ್ಲಿ ಸಿಕ್ಕ ಡೆತ್ ನೋಟ್ ಪ್ರಕಾರ, ತನ್ನ ಪತಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದು, ಬ್ಲಾಕ್ ಫಂಗಸ್ ಬಗ್ಗೆಯೂ ಹೆದರಿಕೊಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಗುಣವತಿ ಹೇಳಿದ್ದಾರೆ.

ತಮಗೆ ಮಧುಮೇಹ ಖಾಯಿಲೆ ಇದ್ದು ನಿಯಂತ್ರಣಕ್ಕೆ ಬರುತ್ತಿಲ್ಲ, ಮಕ್ಕಳಾಗಿಲ್ಲ, ಒಮ್ಮೆ ಮಗುವಾಗಿದ್ದರೂ 13 ದಿನದಲ್ಲಿ ಸಾವನ್ನಪ್ಪಿತ್ತು ಎಂದು ಗುಣವತಿ ಹೇಳಿರುವುದು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ತಮ್ಮ ಅಂತ್ಯಕ್ರಿಯೆಗಾಗಿ ಒಂದು ಲಕ್ಷ ರೂಪಾಯಿ ತೆಗೆದಿಟ್ಟಿದ್ದು, ಅಂತ್ಯಕ್ರಿಯೆಯನ್ನು ಹಿಂದೂ ಸಂಘಟನೆ ನಾಯಕರಾದ ಶರಣ್ ಪಂಪ್ ವೆಲ್ ಹಾಗೂ ಸತ್ಯಜಿತ್ ಸುರತ್ಕಲ್ ಅವರು ನಡೆಸಬೇಕು ಎಂದು ಡೆತ್ ನೋಟ್ ನಲ್ಲಿ ದಂಪತಿ ಮನವಿ ಮಾಡಿದ್ದಾರೆ.





























































































































































































































error: Content is protected !!
Scroll to Top