Wednesday, January 19, 2022
spot_img
Homeಶೈಕ್ಷಣಿಕ1 ರಿಂದ 8ನೇ ತರಗತಿ ಪ್ರಾರಂಭಕ್ಕೆ ಚಿಂತನೆ: ಬಿ.ಸಿ.ನಾಗೇಶ್

1 ರಿಂದ 8ನೇ ತರಗತಿ ಪ್ರಾರಂಭಕ್ಕೆ ಚಿಂತನೆ: ಬಿ.ಸಿ.ನಾಗೇಶ್

ಚಿತ್ರದುರ್ಗ: ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯುಸಿ ತರಗತಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ ಮುಂದಿನ ದಿನಗಳಲ್ಲಿ 1 ರಿಂದ 8 ನೇ ತರಗತಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪೋಷಕರು ಹಾಗೂ ಮಕ್ಕಳ ಧೈರ್ಯ ನೋಡಿ ಶಾಲೆ ತೆರೆಯಲಾಗುತ್ತಿದೆ. ಈಗಾಗಲೇ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು,  ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ತಿಳಿಸಲಾಗಿದೆ ಎಂದರು.

ಇನ್ನು, ಯಾವುದೇ ಕಾರಣಕ್ಕೂ ಬಲವಂತವಾಗಿ ಮಕ್ಕಳನ್ನು ಶಾಲೆಗೆ ಕರೆತರುವಂತಿಲ್ಲ. ಒಂದು ಪೋಷಕರು ಇದಕ್ಕೆ ಸಹಮತನೀಡದಿದ್ದರೇ,  ಆನ್ ಲೈನ್ ತರಗತಿ ಮೂಲಕ ಅವರಿಗೆ ಅಭ್ಯಾಸ ಮುಂದುವರೆಯುವುದು. ಈ ಕುರಿತು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಂದು ವೇಳೆ ಕೋವಿಡ್ ದೃಢಪಟ್ಟರೇ ಒಂದು ವಾರಗಳ ಕಾಲ ಶಾಲೆ ಮುಚ್ಚಲಾಗುವುದು. ನಂತರ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುವುದು. ಶೇ.30 ರಿಂದ 40 ರಷ್ಟು ಮಕ್ಕಳು ಆನ್ ಲೈನ್ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದರು.  

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!