Saturday, October 16, 2021
spot_img
Homeವಿದೇಶಮಂಗಳೂರು – ಯು.ಎ.ಇ ವಿಮಾನಯಾನ ಇಂದಿನಿಂದ ಪುನರಾರಂಭ

ಮಂಗಳೂರು – ಯು.ಎ.ಇ ವಿಮಾನಯಾನ ಇಂದಿನಿಂದ ಪುನರಾರಂಭ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌.ಟಿ.ಪಿ.ಸಿ.ಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಇಂದಿನಿಂದ ವಿಮಾನಯಾನ ಸಂಚಾರ ಮತ್ತೆ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. ಆ. 20 ರಂದು ಮಂಗಳೂರಿನಿಂದ ದುಬೈಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿರುವುದಾಗಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ತಿಳಿಸಿದೆ. ಭಾರತದ ವಿಮಾನಗಳಿಗೆ ಯು.ಎ.ಇ ವಿಧಿಸಿದ್ದ ನಿರ್ಬಂಧವನ್ನು ಆ. 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!