ಕಾರ್ಕಳ : ಶೈಕ್ಷಣಿಕ ಚಟುವಟಿಕೆಯೊಂದಿಗೆ ಹತ್ತಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತ ಇಡೀ ರಾಜ್ಯದಲ್ಲೇ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜ್ಞಾನಸುಧಾ ಕಾರ್ಕಳದ ಹೆಮ್ಮೆಯ ಸಂಸ್ಥೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಆ. 22ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಗೋಪಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ – ಸ್ನೇಹಕೂಟ ಹಾಗೂ ಅಟಲ್ಟಿಂಕರಿಂಗ್ ಲ್ಯಾಬ್ಉದ್ಘಾಟನಾ ಕಾರ್ಯಕ್ರಮದಲ್ಲಿಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತಃಕರಣ ಶುದ್ಧವಿದ್ದಾಗ ಮಾತ್ರ ಸಮಾಜಮುಖಿ ಕಾರ್ಯ ಮಾಡಲು ಸಾಧ್ಯ. ಪೋಷಕರ ಆಶಯದಂತೆ ಜ್ಞಾನಸುಧಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಉದ್ಯಮಿ ಬೋಳ ಪ್ರಭಾಕರ್ ಕಾಮತ್, ಪ್ರತಿಭೆ ಬೆಳಕಿಗೆ ಬರಬೇಕಾದರೆ ಅದಕ್ಕೊಂದು ಸೂಕ್ತ ವೇದಿಕೆ ಬೇಕು. ಅಂತಹ ವೇದಿಕೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆ ನೀಡುತ್ತಿರುವುದು ಅಭಿನಂದನೀಯವೆಂದರು.
ಅಭಿನಂದನೆ
ಸಚಿವ ಸುನಿಲ್ ಕುಮಾರ್ ಅವರಿಗೆ ಎ.ಪಿ.ಜಿ.ಇ.ಟಿ ವತಿಯಿಂದ ಸನ್ಮಾನಿಸಲಾಯಿತು. ಡಾ. ಸುಧಾಕರ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಎ.ಪಿ.ಜಿ.ಇ.ಟಿ ಟ್ರಸ್ಟಿ ಕರುಣಾಕರ್ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು. ಪಿ.ಆರ್.ಓ. ಜ್ಯೋತಿಪದ್ಮನಾಭ ಭಂಡಿ ವಂದಿಸಿದರು.