ಬೆಂಗಳೂರು: ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಇಬ್ಬರ ಸಜೀವ ದಹನ, ಮೂವರು ಗಂಭೀರ

ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

ಮಾಗಡಿ ರಸ್ತೆಯಲ್ಲಿರುವ ಅಂಜನ್ ಚಿತ್ರಮಂದಿರ ಬಳಿ ಘಟನೆ ನಡೆದಿದೆ. ಮಧ್ಯಾಹ್ನ 1.45ರ ಸುಮಾರಿಗೆ ಬಾಯ್ಲರ್ ಸ್ಫೋಟಗೊಂಡಿದೆ. ಈ ವೇಳೆ 6 ಮಂದಿ ಕೆಲಸ ಮಾಡುತ್ತಿದ್ದರು. 

ಬೇಕರಿಗೆ ಬೇಕಾದ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗುತ್ತಿದ್ದಾಗ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಇನ್ನು ನಾಲ್ವರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು ಅವರನ್ನು  ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೂರು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಸ್ಫೋಟದಲ್ಲಿ ಫ್ಯಾಕ್ಟರಿ ಪಕ್ಕದ ಮನೆಯಲ್ಲಿದ್ದ ಇಬ್ಬರಿಗೂ ಸುಟ್ಟು ಗಾಯಗಳಾಗಿವೆ.





























































































































































































































error: Content is protected !!
Scroll to Top