Tuesday, September 28, 2021
spot_img
Homeಸ್ಥಳೀಯ ಸುದ್ದಿಎಸ್‌ಸಿಡಿಸಿಸಿ ಬ್ಯಾಂಕ್ ಅಜೆಕಾರು ಶಾಖೆ ಸ್ಥಳಾಂತರ

ಎಸ್‌ಸಿಡಿಸಿಸಿ ಬ್ಯಾಂಕ್ ಅಜೆಕಾರು ಶಾಖೆ ಸ್ಥಳಾಂತರ

ರೈತರ ಅಭಿವೃದ್ಧಿಯಲ್ಲಿ ಸಹಕಾರಿ ಸಂಘದ ಸಹಕಾರ ಅಪಾರ – ಸುನಿಲ್‌ ಕುಮಾರ್‌

ಕಾರ್ಕಳ : ಕೃಷಿಕರು ಕೃಷಿಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ, ಸ್ವಾವಲಂಬಿಯಾಗಿ ಬೆಳೆಯುವಲ್ಲಿ ಸಹಕಾರಿ ಸಂಘಗಳ ಸಹಕಾರ ಅಪಾರವಾದುದು ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಅವರು ಆ. 24ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಸ್ಥಳಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರದ ಸಾಲ ಮನ್ನಾದಂತಹ ಯೋಜನೆಗಳು ಸಹಕಾರಿ ಸಂಘಗಳ ಮೂಲಕ ಕಾರ್ಯಗತಗೊಳ್ಳುತ್ತಿವೆ. ಒಂದು ಕುಟುಂಬದ ಓರ್ವನ ಹೆಸರಲ್ಲಿ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ನೀಡಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಪ್ರತಿ ಸದಸ್ಯನ ಹೆಸರಿನಲ್ಲೂ ಸಾಲ ನೀಡುವ ಯೋಜನೆ ರೂಪಿಸಲಾಗುತ್ತಿದೆ. ಕೇಂದ್ರ ಸರಕಾರ ಸಹಕಾರಿ ಸಂಘದ ಅಭ್ಯುದಯಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತಿದೆ. ಸಹಕಾರಿ ರಂಗದ ಎಲ್ಲ ಪ್ರಯೋಜನವನ್ನು ಸದಸ್ಯರು ಪಡೆದುಕೊಳ್ಳಬೇಕೆಂದು ಸಚಿವರು ಹೇಳಿದರು.

3.20 ಕೋಟಿ ರೂ. ಠೇವಣಿ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನ ಅಧ್ಯಕ್ಷ ರಾಜೇಂದ್ರ ಕುಮಾರ್ ಮಾತನಾಡಿ, ನಬಾರ್ಡ್ ನಿಂದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಇತರ ಎರಡು ಜಿಲ್ಲೆ ಗಳನ್ನು ಸೇರಿಸಿ 2 ಸಾವಿರ ಕೋಟಿ ರೂ. ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಿದೆ. ಅಜೆಕಾರು ಶಾಖೆ ಸ್ಥಳಾಂತರ ಸಂದರ್ಭದಲ್ಲಿ 3.5 ಕೋಟಿ ರೂ. ಠೇವಣಿ ಸಂಗ್ರಹವಾಗಿದೆ. ಇದು ಇಲ್ಲಿನವರ ಶ್ರೀಮಂತಿಕೆಯೊಂದಿಗೆ ಹೃದಯ ಶ್ರೀಮಂತಿಕೆಗೆ ಸಾಕ್ಷಿ ಎಂದರು.

ಸಚಿವ ಸುನಿಲ್‌ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಸ್ವಸಹಾಯ ಸಂಘಗಳಿಗೆ ಇದೇ ಸಂದರ್ಭ ಚಾಲನೆ ನೀಡಲಾಯಿತು. ಸಾಲಪತ್ರಗಳ ವಿತರಣೆ ಮಾಡಲಾಯಿತು.

ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಭವಾನಿಶಂಕರ್, ಕೆಎಂಎಫ್ ನಿರ್ದೇಶಕ ಸುಧಾಕರ್ ಶೆಟ್ಟಿ ಬಜಗೋಳಿ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉದಯ ಎಸ್. ಕೋಟ್ಯಾನ್, ದೇವಸ್ಯ ಶಿವರಾಮ ಶೆಟ್ಟಿ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಕೋಟ್ಯಾನ್, ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ , ಸುನೀಲ್ ಬಜಗೋಳಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ, ಮರ್ಣೆ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬೆಳಪು ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಗೋಪಿನಾಥ್ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!