Tuesday, September 28, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್‌ಪಿ ಭೇಟಿ

ಕಾರ್ಕಳ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್‌ಪಿ ಭೇಟಿ

ಕಾರ್ಕಳ : ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಕುಮಾರಸ್ವಾಮಿ ಅವರು ಆ. 25ರಂದು ಕಾರ್ಕಳ ತಾಲೂಕು ಕಚೇರಿಗೆ ದಿಢೀರ್‌ ಆಗಿ ಭೇಟಿ ನೀಡಿದರು. ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್‌ ನಿರೀಕ್ಷಕ ರಾಜಶೇಖರ್‌ ಎಲ್.‌ ಅವರೊಂದಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್‌ಪಿ ಅವರು ತಾಲೂಕು ಕಚೇರಿಯಲ್ಲಿನ ಕಡತಗಳನ್ನು ಪರಿಶೀಲಿಸಿದರು. ವಿಲೇವಾರಿ ಬಾಕಿಯಿರುವ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಈ ಸಂದರ್ಭ ಅಧಿಕಾರಿಗಳಿಗೆ ಸೂಚಿಸಿದರು.

ಹಿರಿಯರನ್ನು ಕಾಯುವಂತೆ ಮಾಡಬೇಡಿ
ತಾಲೂಕು ಕಚೇರಿಯಲ್ಲಿನ ಉಪನೋಂದಣಾ ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್‌ಪಿಯವರು ಹಿರಿಯರ ಕೆಲಸವನ್ನು ವಿಳಂಬ ಮಾಡದೇ ಕೂಡಲೇ ಮಾಡಿಕೊಡುವಂತೆ ತಾಕೀತು ಮಾಡಿದರು. ಸಾರ್ವಜನಿಕರೊಂದಿಗೆ ಮಾತನಾಡಿದ ಅವರು ಏನಾದರೂ ದೂರುಗಳಿದ್ದಲ್ಲಿ 0820-2536661 ಸಂಪರ್ಕಿಸುವಂತೆಯೂ ತಿಳಿಸಿದರು.

ಸರಕಾರಿ ಆಸ್ಪತ್ರೆಗೆ ಭೇಟಿ
ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಲೋಕಾಯುಕ್ತ ಎಸ್‌ಪಿ ಅಲ್ಲಿನ ವೈದ್ಯಾಧಿಕಾರಿಯೊಂದಿಗೆ ಚರ್ಚಿಸಿದರು. ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ವೈದ್ಯಾಧಿಕಾರಿ ಡಾ. ಕೆ.ಎಸ್‌. ರಾವ್‌ ಅವರಿಗೆ ನಿರ್ದೇಶನ ನೀಡಿದರು. ಎಎಸ್ಐ ನಾಗೇಶ್‌ ಉಡುಪ, ಸಿಬ್ಬಂದಿ ನಾಗರಾಜ್‌, ಚಾಲಕ ರಾಜೇಶ್‌ ಮೇಸ್ತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!